ETV Bharat / state

ರಾಜ್ಯದ ಹಿತಕ್ಕಿಂತ ಮೋದಿ ಟೀಕೆಯೇ ಸಿದ್ದರಾಮಯ್ಯಗೆ ದೊಡ್ಡ ಕೆಲಸವಾಗಿದೆ: ಆರ್​​ ಅಶೋಕ್

ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವುದೇ ದೊಡ್ಡ ಕೆಲಸ ಆಗಿದೆ ಎಂದು ಆರ್ ಆಶೋಕ್​ ಟೀಕಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಆರ್​.ಅಶೋಕ್ ಟೀಕೆ​
ಸಿದ್ದರಾಮಯ್ಯ ವಿರುದ್ಧ ಆರ್​.ಅಶೋಕ್ ಟೀಕೆ​
author img

By ETV Bharat Karnataka Team

Published : Dec 18, 2023, 2:22 PM IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯದ ಹಿತಾಸಕ್ತಿ ಕಾಪಾಡುವುದಕ್ಕಿಂತ ಪ್ರಧಾನ ಮಂತ್ರಿಗಳ ಮೇಲೆ, ಕೇಂದ್ರ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುವುದೇ ದೊಡ್ಡ ಕೆಲಸವಾದಂತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.

ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ಜೊತೆ ಉತ್ತಮ ಬಾಂಧವ್ಯ ಕಾಯ್ದುಕೊಳ್ಳುವುದು ಒಬ್ಬ ಜವಾಬ್ದರಿಯುತ ಮುಖ್ಯಮಂತ್ರಿಗೆ ಇರಬೇಕಾದ ಪ್ರಮುಖ ಲಕ್ಷಣ ಮಾತ್ರವಲ್ಲ, ಅದು ಕರ್ತವ್ಯ ಕೂಡ ಹೌದು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ಹಿತಾಸಕ್ತಿ ಕಾಪಾಡುವುದಕ್ಕಿಂತ ರಾಜಕೀಯ ಪ್ರೇರಿತ ಆರೋಪ ಮಾಡುವುದೇ ದೊಡ್ಡ ಕೆಲಸವಾದಂತಿದೆ ಎಂದು ಟ್ವೀಟ್ ಮೂಲಕ ಆರೋಪಿಸಿದ್ದಾರೆ.

ಮೊನ್ನೆ ಸದನದಲ್ಲಿ ಪ್ರಧಾನಿ ಮೋದಿ ಅವರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತೋರಿದ ರೋಷಾವೇಶ ಗಮನಿಸಿದರೆ ರಾಜ್ಯದ ಜನತೆಯ ಹಿತರಕ್ಷಣೆಗಿಂತ ತಮ್ಮ ಹೈಕಮಾಂಡ್ ಅನ್ನು ಮೆಚ್ಚಿಸುವುದೇ ಅವರ ಉದ್ದೇಶವೆಂದು ಅನ್ನಿಸುತ್ತದೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳಿಗೆ ತಮ್ಮದೇ ಆದ ಸಂವಿಧಾನ ಬದ್ಧ ಜವಾಬ್ದಾರಿಗಳಿವೆ. ಈ ಹಿಂದೆ ಒಂದು ರಾಜ್ಯದ ಮುಖ್ಯಮಂತ್ರಿಗಳಾಗಿ ಅತ್ಯಂತ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದ ಪ್ರಧಾನಿ ಮೋದಿ ಅವರಿಗೆ ರಾಜ್ಯ ಸರ್ಕಾರಗಳ ಇತಿಮಿತಿಗಳು, ಅಗತ್ಯತೆಗಳು, ಅಪೇಕ್ಷೆಗಳ ಬಗ್ಗೆ ಇರುವಷ್ಟು ಅರಿವು, ಅವಗಾಹನೆ, ಸಂವೇದನೆ ಬಹುಶಃ ಹಿಂದಿನ ಬೇರೆ ಯಾವ ಪ್ರಧಾನಮಂತ್ರಿಗೂ ಇರಲಿಲ್ಲ ಎಂದಿದ್ದಾರೆ.

ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಅವರ ಭೇಟಿಗೆ ಸಮಯ ಸಿಕ್ಕಿರುವಾಗ ತಮ್ಮ ಕ್ಷುಲ್ಲಕ ರಾಜಕೀಯ ಬದಿಗಿಟ್ಟು, ರಾಜ್ಯದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ, ಕನ್ನಡ ನಾಡಿನ ಆರೂವರೆ ಕೋಟಿ ಜನತೆಯ ಹಿತರಕ್ಷಣೆಯ ದೃಷ್ಟಿಯಿಂದ ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ತಮ್ಮ ಮುತ್ಸದ್ಧಿತನ ಪ್ರದರ್ಶಿಸುತ್ತಾರೆ ಎಂದು ಭಾವಿಸುತ್ತೇನೆ ಎಂದು ಟ್ವೀಟ್ ಮೂಲಕ ಅಶೋಕ್ ಕುಟುಕಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ಜೈಲಿಗೆ ಹೋಗಲು ಕಾರಣ ವಿಜಯೇಂದ್ರ: ಹೆಚ್​.ವಿಶ್ವನಾಥ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.