ETV Bharat / state

ಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ಬಿಡುಗಡೆಗೊಳಿಸಿ: ಸಿಎಂಗೆ ಸಚಿವ ಆರ್‌.ಅಶೋಕ್ ಪತ್ರ - ETV Bharath Kannada news

ಕಂದಾಯ ಸಚಿವ ಆರ್.ಅಶೋಕ್ ಅವರು​ ಮಂಡ್ಯ ಜಿಲ್ಲೆಯ ಉಸ್ತುವಾರಿಯಿಂದ ವಿಮುಕ್ತಿಗೊಳಿಸುವಂತೆ ಕೋರಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

R Ashok written a letter to the CM release from the post of Minister in charge of Mandya
ಸಿಎಂಗೆ ಅಶೋಕ್ ಪತ್ರ
author img

By

Published : Feb 10, 2023, 4:11 PM IST

ಬೆಂಗಳೂರು: ಸದ್ಯ ನಿರ್ವಹಿಸುತ್ತಿರುವ ಜವಾಬ್ದಾರಿಗಳ ಕಾರಣದಿಂದಾಗಿ ಮಂಡ್ಯ ಜಿಲ್ಲೆಗೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಬಿಡುಗಡೆ ಮಾಡುವಂತೆ ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ಗೆ ಕಂದಾಯ ಸಚಿವ ಆರ್.ಅಶೋಕ್ ಪತ್ರ ಬರೆದಿದ್ದಾರೆ.

ಸಚಿವ ಆರ್‌.ಅಶೋಕ್‌ ಪತ್ರದ ಸಾರಾಂಶ: ಗಣರಾಜ್ಯೋತ್ಸವ ದಿನದಂದು ಮಂಡ್ಯ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ಮಾಡಲು ನನ್ನನ್ನು ನೇಮಿಸಿದ್ದು, ಅದೇ ಸಂದರ್ಭದಲ್ಲಿ ಉಸ್ತುವಾರಿ ಸಚಿವರನ್ನಾಗಿಯೂ ನೇಮಿಸಲಾಗಿದೆ. ತಾವು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ನನಗೆ ಯಾವುದೇ ಜಿಲ್ಲೆಯ ಉಸ್ತುವಾರಿ ನೀಡದಂತೆ ಮನವಿ ಮಾಡಿದ್ದೆ. ಆದಾಗ್ಯೂ ತಾವು ನನ್ನ ಮೇಲೆ ವಿಶ್ವಾಸವಿಟ್ಟು ಗಣರಾಜ್ಯೋತ್ಸವ ದಿನಾಚರಣೆಯಂದು ಮಂಡ್ಯ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ಮಾಡಲು ಹಾಗೂ ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವನನ್ನಾಗಿ ನೇಮಿಸಿರುವುದಕ್ಕೆ ನಾನು ಆಭಾರಿ. ಆದರೆ ಈಗ ಉಸ್ತುವಾರಿ ಜವಾಬ್ದಾರಿ ನಿರ್ವಹಣೆಗೆ ಸಮಯದ ಕೊರತೆ ಇದೆ. ಹಾಗಾಗಿ ಉಸ್ತುವಾರಿ ಸ್ಥಾನದಿಂದ ನನ್ನನ್ನು ವಿಮುಕ್ತಿಗೊಳಿಸಿ.

ಇತ್ತೀಚೆಗೆ ಕಲಬುರಗಿ ಜಿಲ್ಲೆಯಲ್ಲಿ ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಗಳ ಲಂಬಾಣಿ ತಾಂಡಾ, ಹಟ್ಟಿ, ಇತ್ಯಾದಿ ದಾಖಲೆರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಸುಮಾರು 53,000ಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಸನ್ಮಾನ್ಯ ಪ್ರಧಾನಮಂತ್ರಿಗಳು ವಿತರಿಸಿದ್ದು, ಇದೇ ಮಾದರಿಯಲ್ಲಿ ಮುಂದಿನ 30 ದಿನಗಳಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಬಡವರು ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಮನೆಗಳನ್ನು ಸಕ್ರಮಗೊಳಿಸಿ 94ಸಿ ಮತ್ತು 94ಸಿಸಿ ಅಡಿಯಲ್ಲಿ ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೋಲಾರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಸೇರಿದ ಸುಮಾರು 10,000 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಬೆಂಗಳೂರು ನಗರದಲ್ಲಿ ನಡೆಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಕಂದಾಯ ಇಲಾಖೆ ಪ್ರಾರಂಭಿಸಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಸರ್ಕಾರದ ಜನಪ್ರಿಯ ಕಾರ್ಯಕ್ರಮವಾಗಿ ಹೊರಹೊಮ್ಮಿದ್ದು, ಪಕ್ಷದ ಶಾಸಕರು ಅವರ ಕ್ಷೇತ್ರದಲ್ಲಿ ನಾನು ವಾಸ್ತವ್ಯ ಹೂಡಬೇಕೆಂದು ಒತ್ತಡ ಹೇರುತ್ತಿದ್ದು, ಇನ್ನೂ ಕನಿಷ್ಠ 2-3 ಜಿಲ್ಲೆಗಳಲ್ಲಿ ನಾನು ಗ್ರಾಮ ವಾಸ್ತವ್ಯ ಮಾಡಬೇಕಿದೆ. ಇದರ ಜೊತೆ ವಿಧಾನಸೌಧದ ಹೊರ ಆವರಣದ ಪೂರ್ವದಿಕ್ಕಿನ ಜಾಗದಲ್ಲಿ ಜಗಜ್ಯೋತಿ ಬಸವೇಶ್ವರರ ಹಾಗೂ ನಾಡಪ್ರಭು ಕೆಂಪೇಗೌಡರ ಪುತ್ಥಳಿಯನ್ನು ಸ್ಥಾಪಿಸುವ ಸಲುವಾಗಿ ರಚಿಸಿರುವ ಉಸ್ತುವಾರಿ ಸಮಿತಿಗೆ ನನ್ನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಗಿದ್ದು, ಈ ಕಾರ್ಯವನ್ನು 30 ದಿನಗಳಲ್ಲಿ ಪೂರ್ಣಗೊಳಿಸಿ ಪುತ್ಥಳಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಆಯೋಜಿಸಬೇಕಾಗಿದೆ.

14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಘಟನಾ ಸಮಿತಿಗೆ ನನ್ನನ್ನು ಅಧ್ಯಕ್ಷನನ್ನಾಗಿ ನೇಮಿಸಿದ್ದು, ಮಾರ್ಚ್ 23 ರಿಂದ ಮಾರ್ಚ್ 30 ರವರೆಗೆ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಯಶಸ್ವಿಯಾಗಿ ನಡೆಸಬೇಕಾಗಿರುತ್ತದೆ. ಇವೆಲ್ಲವೂ ಸರ್ಕಾರದ ಪ್ರಮುಖ ಜನಪ್ರಿಯ ಕಾರ್ಯಕ್ರಮಗಳಾಗಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮಗಳಿಗೆ ನಾನು ಹೆಚ್ಚಿನ ಸಮಯ ವಿನಿಯೋಗಿಸಬೇಕಾಗಿದೆ. ಈ ಮೇಲಿನ ಜವಾಬ್ದಾರಿಗಳಿರುವುದರಿಂದ ಮಂಡ್ಯ ಜಿಲ್ಲಾ ಉಸ್ತುವಾರಿಯಾಗಿ ಹೆಚ್ಚಿನ ಕಾಲಾವಕಾಶ ನೀಡಲು ಸಾಧ್ಯವಾಗುತ್ತಿಲ್ಲ. ಈ ಎಲ್ಲಾ ಜವಾಬ್ದಾರಿಗಳ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವರ ಜವಾಬ್ದಾರಿಯಿಂದ ನನ್ನನ್ನು ವಿಮುಕ್ತಿಗೊಳಿಸಬೇಕೆಂದು ಕೋರುತ್ತೇನೆ.

ಜನವರಿ 25ರಂದು ನಾನು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಬೈಕ್ ರ್ಯಾಲಿ ಮೂಲಕ ನನ್ನನ್ನು ಸ್ವಾಗತಿಸಿ, ಮಂಡ್ಯ ಜಿಲ್ಲೆಯ ಜನತೆ ತೋರಿಸಿದ ಪ್ರೀತಿಗೆ ನಾನು ಚಿರಋಣಿ. ಎಲ್ಲಾ ನಾಗರಿಕ ಬಂಧುಗಳಿಗೆ ಸಾಷ್ಟಾಂಗ ನಮಸ್ಕಾರಗಳು ಎಂದು ಮಂಡ್ಯ ಜಿಲ್ಲೆ ಜನತೆಗೆ ಕೃತಜ್ಞತೆ ಎಂದು ಪತ್ರದಲ್ಲಿ ಸಚಿವ ಆರ್‌.ಅಶೋಕ್‌ ಬರೆದಿದ್ದಾರೆ.

ಇದನ್ನೂ ಓದಿ: 'ಕುಮಾರಸ್ವಾಮಿ ಯಾವಾಗ ಬೇಕಾದ್ರೂ ಯೂಟರ್ನ್​ ಹೊಡಿತಾರೆ': ಸಿ.ಟಿ ರವಿ ವ್ಯಂಗ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.