ETV Bharat / state

ಗುರು ರಾಘವೇಂದ್ರ ಬ್ಯಾಂಕ್​ಗೆ ನೂತನ ಆಡಳಿತಾಧಿಕಾರಿಯಾಗಿ ಆರ್. ಅಶೋಕನ್ ನೇಮಕ - ಗುರು ಸಾರ್ವಭೌಮ ಸೌಹರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿಮಿಟೆಡ್

ನ್ಯಾಯಾಲಯದ ಸೂಚನೆಯಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪರಿಣಿತಿ ಹೊಂದಿರುವ ಸಿಂಡಿಕೇಟ್ ಬ್ಯಾಂಕ್​ನ ನಿವೃತ್ತ ಪ್ರಧಾನ ವ್ಯವಸ್ಥಾಪಕ ಆರ್. ಅಶೋಕನ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

High court News
ಹೈಕೋರ್ಟ್
author img

By

Published : Nov 20, 2020, 9:56 PM IST

ಬೆಂಗಳೂರು: ಸಾರ್ವಜನಿಕರ ಠೇವಣಿ ಹಣ ದುರ್ಬಳಕೆ ಮಾಡಿಕೊಂಡಿರುವ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿಮಿಟೆಡ್‌ಗೆ ನೂತನ ಆಡಳಿತಾಧಿಕಾರಿಯಾಗಿ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಪ್ರಧಾನ ವ್ಯವಸ್ಥಾಪಕ ಆರ್. ಅಶೋಕನ್ ಅವರನ್ನು ನೇಮಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಬ್ಯಾಂಕ್​ನ ಹಗರಣದ ಕುರಿತು ಡಿಐಜಿ ಹಂತದ ಅಧಿಕಾರಿಯಿಂದ ತನಿಖೆ ನಡೆಸಲು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಲಿಖಿತ ಹೇಳಿಕೆ ಸಲ್ಲಿಸಿ, ನ್ಯಾಯಾಲಯದ ಸೂಚನೆಯಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪರಿಣಿತಿ ಹೊಂದಿರುವ ಸಿಂಡಿಕೇಟ್ ಬ್ಯಾಂಕ್​ನ ನಿವೃತ್ತ ಪ್ರಧಾನ ವ್ಯವಸ್ಥಾಪಕ ಆರ್. ಅಶೋಕನ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಹೇಳಿಕೆ ದಾಖಲಿಸಿಕೊಂಡ ಪೀಠ, ಹಿಂದಿನ ಆಡಳಿತಾಧಿಕಾರಿ ಅವಧಿಯಲ್ಲಿ ಸಾಲದ ಖಾತೆಗಳನ್ನು ಮುಚ್ಚಿರುವ ಕುರಿತು ನೂತನ ಆಡಳಿತಾಧಿಕಾರಿ ವಿಚಾರಣೆ ನಡೆಸಬೇಕು. ಸಾಲ ವಸೂಲಿ ಮಾಡಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಬಾಕಿ ಇರುವ ಸಾಲವನ್ನು ವಸೂಲಿ ಮಾಡಲು ಸೂಕ್ತ ಕ್ರಮಗಳನ್ನು ಜರುಗಿಸಬೇಕು. ಈ ಕುರಿತಂತೆ ಕೈಗೊಂಡ ಕ್ರಮಗಳ ವರದಿಯನ್ನು ನಾಲ್ಕು ವಾರಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನೂತನ ಆಡಳಿತಾಧಿಕಾರಿಗೆ ನಿರ್ದೇಶಿಸಿತು.

ಇನ್ನು, ಗುರು ಸಾರ್ವಭೌಮ ಸೌಹರ್ದ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯನ್ನು ಮುಚ್ಚಲು ಸಕ್ಷಮ ಪ್ರಾಧಿಕಾರ ಸಲಹೆ ನೀಡಿದ್ದನ್ನು ಗಂಭೀರವಾಗಿ ಪರಿಗಣಿಸಿದ ಪೀಠ, ಸಕ್ಷಮ ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿತು. ಈ ವಿಚಾರವಾಗಿ ಸರ್ಕಾರವೂ ಸ್ಪಷ್ಟನೆ ನೀಡುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ಮುಂದೂಡಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.