ಬೆಂಗಳೂರು: ಕುಮಾರಕೃಪ ಅತಿಥಿ ಗೃಹದಲ್ಲಿ ಜೆಡಿಎಸ್ನ ಸಚಿವ ಸಾ.ರಾ.ಮಹೇಶ್ ಬಿಜೆಪಿ ನಾಯಕರನ್ನು ಭೇಟಿಯಾಗಿರುವುದು ಆಕಸ್ಮಿಕ. ಮಾತುಕತೆ ಸೌಜನ್ಯದ್ದು, ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಪ್ರವಾಸೋದ್ಯಮ ಇಲಾಖೆಯ ವತಿಯಿಂದ ನಿರ್ವಹಿಸುವ ಕುಮಾರಕೃಪ ಅತಿಥಿ ಗೃಹದ ಹೊಸ ಕಟ್ಟಡಕ್ಕೆ ಕಾರ್ಯನಿಮಿತ್ತ ಸಾ.ರಾ.ಮಹೇಶ್ ಭೇಟಿ ನೀಡಿದ್ದರು. ಅದಕ್ಕೆ ವಿಶೇಷ ಅರ್ಥ ನೀಡುವುದು ಸರಿ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಸುಭದ್ರವಾಗಿದೆ. ವಿಧಾನಮಂಡಲ ಅಧಿವೇಶನ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಿದ್ಧರಾಗಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.