ಬೆಂಗಳೂರು: ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಅವರ ಪಾಸ್ಪೋರ್ಟ್ನ್ನು ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ವಶಪಡಿಸಿಕೊಂಡಿದೆ.
ರಾಘವೇಂದ್ರ ಶೆಟ್ಟಿ ಅವರ ವಿರುದ್ಧ ಹಲವು ಪ್ರಕರಣಗಳಿದ್ದು, ಅವರ ಪಾಸ್‌ಪೋರ್ಟ್ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರೂಪಾ ಡಿ ಮೌದ್ಗಿಲ್ ಅವರು ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಪತ್ರ ಬರೆದಿದ್ದರು. ಈ ಪತ್ರದ ಆಧಾರದ ಮೇಲೆ ನ.17ರಂದು ಶೆಟ್ಟಿಯವರ ಪಾಸ್‌ಪೋರ್ಟ್ ವಶಕ್ಕೆ ಪಡೆಯಲಾಗಿದೆ.
ಕೆಎಸ್‌ಎಚ್‌ಡಿಸಿಎಲ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಬೇಳೂರು ರಾಘವೇಂದ್ರ ಶೆಟ್ಟಿಯವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ರಾಘವೇಂದ್ರ ಶೆಟ್ಟಿಯವರ ಡೈರೆಕ್ಟರ್ ಐಡೆಂಟಿಫಿಕೇಶನ್ ನಂಬರ್ ಅನರ್ಹವಾಗಿದ್ದರೂ ಈ ವಿಚಾರವನ್ನು ಮುಚ್ಚಿಟ್ಟು ನಿಗಮದ ಅಧ್ಯಕ್ಷರಾಗಿ ಮುಂದುವರೆದು ಲಕ್ಷಾಂತರ ರೂಪಾಯಿ ವೇತನ ಭತ್ಯೆ ಪಡೆದ ಆರೋಪವೂ ಕೇಳಿ ಬಂದಿತ್ತು. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಆಧಾರ್, ಪಾನ್ ಕಾರ್ಡ್, ಪಾಸ್‌ಪೋರ್ಟ್ ಎಲ್ಲವೂ ಅಕ್ರಮ: ಬೆಂಗಳೂರಿನಲ್ಲಿ ನೇಪಾಳಿ ಪ್ರಜೆ ಬಂಧನ