ETV Bharat / state

ಕೆಐಎಎಲ್ ಗೆ ಆಗಮಿಸಿದ ರಾಹುಲ್ ಗಾಂಧಿ - ಕೆಐಎಎಲ್ ಗೆ ಆಗಮಿಸಿದ ರಾಹುಲ್ ಗಾಂಧಿ

ಡಾ.ಶಿವಕುಮಾರ್ ಸ್ವಾಮೀಜಿ ಅವರ 115 ನೇ ಜಯಂತಿ ಹಿನ್ನೆಲೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ.

ಕೆಐಎಎಲ್ ಗೆ ಆಗಮಿಸಿದ ರಾಹುಲ್ ಗಾಂಧಿ
ಕೆಐಎಎಲ್ ಗೆ ಆಗಮಿಸಿದ ರಾಹುಲ್ ಗಾಂಧಿ
author img

By

Published : Mar 31, 2022, 3:05 PM IST

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎಎಲ್) ಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸಿದ್ದಾರೆ. 115ನೇ ಡಾ. ಶಿವಕುಮಾರ್ ಸ್ವಾಮೀಜಿಯ ಜಯಂತಿ ಹಿನ್ನೆಲೆ ಬೆಂಗಳೂರಿಗೆ ಬಂದಿಳಿದಿದ್ದಾರೆ. ಕೆಐಎಎಲ್ ನಿಂದ ರಸ್ತೆ ಮೂಲಕ ತುಮಕೂರಿಗೆ ತೆರಳಲಿದ್ದಾರೆ. ಇವರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ ಸ್ವಾಗತಿಸಿದರು.

ನಾಳೆ ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದಲ್ಲಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ 115 ನೇ ಜಯಂತ್ಯುತ್ಸವ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಹುಲ್​ ಗಾಂಧಿ ಆಗಮಿಸಿದ್ದಾರೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್​ ಶಾ ಅವರು ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಲ್ಲಿಂದ ನಾಳೆ ಬೆಳಗ್ಗೆ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀಗಳ ಜಯಂತ್ಯುತ್ಸವದಲ್ಲಿ ಭಾಗವಹಿಸಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.