ಬೆಂಗಳೂರು: ಇಲ್ಲಿನ ಪ್ಯಾಟ್ರಿಕ್ ಚರ್ಚ್ನಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ರಾಹುಲ್ ಗಾಂಧಿ, ಅಂತಿಮ ನಮನ ಸಲ್ಲಿಸಿದರು.
ಬಳಿಕ ನಗರದ ಜೋಸೆಫ್ ಕಾಲೇಜು ಸಮೀಪದಲ್ಲಿರುವ ರೆಸ್ಟ್ ಹೌಸ್ ರಸ್ತೆಯಲ್ಲಿರುವ ಫರ್ನಾಂಡಿಸ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಆಸ್ಕರ್ ಪತ್ನಿ ಬ್ಲಾಸಂ ಫರ್ನಾಂಡಿಸ್, ಪುತ್ರ ಓಶಾನ್ ಫರ್ನಾಂಡಿಸ್ ಹಾಗು ಪುತ್ರಿ ಓಶೀನ್ ಫರ್ನಾಂಡಿಸ್ ಸೇರಿದಂತೆ ಮತ್ತಿತರರಿದ್ದರು.
ಇದಕ್ಕೂ ಮುನ್ನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ರಾಜ್ಯ ಕಾಂಗ್ರೆಸ್ ನಾಯಕರು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸಿದ್ದರಾಮಯ್ಯ, ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಇದ್ದರು.
ಇದನ್ನೂ ಓದಿ: ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ಗೆ ಕೈ ನಾಯಕರಿಂದ ಅಂತಿಮ ನುಡಿ - ನಮನ