ETV Bharat / state

ಬೆಂಗಳೂರು ನಗರ ಕಾಂಗ್ರೆಸ್ ಮುಖಂಡರ ಜೊತೆ ರಾಹುಲ್ ಗಾಂಧಿ ಸಭೆ - ಕಾಂಗ್ರೆಸ್ ಸದಸ್ಯತ್ವ ಅಭಿಯಾನ

ಮುಂಬರುವ ಬಿಬಿಎಂಪಿ ಚುನಾವಣೆ ಹಾಗೂ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಕಾಂಗ್ರೆಸ್ ಮುಖಂಡರ ಜೊತೆ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚರ್ಚೆ ನಡೆಸುತ್ತಿದ್ದಾರೆ.

ರಾಹುಲ್ ಗಾಂಧಿ
ರಾಹುಲ್ ಗಾಂಧಿ
author img

By

Published : Apr 1, 2022, 12:31 PM IST

ಬೆಂಗಳೂರು: ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಹಿಂಭಾಗದ ರಾಜೀವ್ ಗಾಂಧಿ ಭವನದಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯ ಸದಸ್ಯತ್ವ ಅಭಿಯಾನದ ಪ್ರಗತಿ ಹಾಗೂ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ನಗರ ಕಾಂಗ್ರೆಸ್ ಮುಖಂಡರ ಜೊತೆ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆ ನಡೆಸುತ್ತಿದ್ದಾರೆ.

ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು ಹಾಗೂ ರಾಜ್ಯ ಮತ್ತು ರಾಷ್ಟ್ರೀಯ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಸಭೆ ನಡೆಯುತ್ತಿದೆ. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಹಾಗೂ ಶಾಸಕರು ಸಭೆಯಲ್ಲಿ ಪಾಲ್ಗೊಂಡು ಸಮಾಲೋಚಿಸುತ್ತಿದ್ದಾರೆ.

ಕಾಂಗ್ರೆಸ್ ಮುಖಂಡರ ಜೊತೆ ರಾಹುಲ್ ಗಾಂಧಿ ಸಭೆ
ಕಾಂಗ್ರೆಸ್ ಮುಖಂಡರ ಜೊತೆ ರಾಹುಲ್ ಗಾಂಧಿ ಸಭೆ

ಸಭೆಯು ಮಧ್ಯಾಹ್ನ 1.30 ರವರೆಗೆ ನಡೆಯಲಿದ್ದು, ಮುಂಬರುವ ದಿನಗಳಲ್ಲಿ ಎದುರಾಗುವ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್​ ಏಕಾಂಗಿಯಾಗಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕಾರ್ಯತಂತ್ರಗಳ ಕುರಿತು ರಾಹುಲ್ ಗಾಂಧಿ ಚರ್ಚಿಸುತ್ತಿದ್ದಾರೆ. ಕಳೆದ ಅವಧಿಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು 4 ವರ್ಷ ಬಿಬಿಎಂಪಿ ಆಡಳಿತ ನಡೆಸಿದ ಕಾಂಗ್ರೆಸ್, ಇದೀಗ ಮತ್ತೆ ಅಧಿಕಾರ ಹಿಡಿಯುವ ಪ್ರಯತ್ನ ನಡೆಸುತ್ತಿದೆ.

ಕಾಂಗ್ರೆಸ್ ಸದಸ್ಯತ್ವ ಅಭಿಯಾನ : ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ರಾಷ್ಟ್ರದಲ್ಲಿಯೇ ಕರ್ನಾಟಕದಲ್ಲಿ ಅತಿ ಹೆಚ್ಚು ಸದಸ್ಯತ್ವ ನೋಂದಣಿ ಮೂಲಕ ಉತ್ತಮ ಸಾಧನೆ ಮಾಡಿದೆ. ಈ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುವ ಜೊತೆಗೆ ಮುಂಬರುವ ದಿನಗಳಲ್ಲಿ ಇನ್ನಷ್ಟು ಸದಸ್ಯರ ನೋಂದಣಿ ಮೂಲಕ ಬೆಂಗಳೂರು ನಗರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ರಾಹುಲ್ ಗಾಂಧಿ ಸಲಹೆ ಹಾಗೂ ಮಾರ್ಗದರ್ಶನ ನೀಡುತ್ತಿದ್ದಾರೆ.

ಕಾಂಗ್ರೆಸ್ ಮುಖಂಡರ ಜೊತೆ ರಾಹುಲ್ ಗಾಂಧಿ ಸಭೆ
ಕಾಂಗ್ರೆಸ್ ಮುಖಂಡರ ಜೊತೆ ರಾಹುಲ್ ಗಾಂಧಿ ಸಭೆ

ಮಧ್ಯಾಹ್ನದ ಭೋಜನ ವಿರಾಮದ ವೇಳೆ ರಾಹುಲ್ ಗಾಂಧಿ ಪ್ರಥಮ ಬಾರಿಗೆ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಇವರಿಗೆ ಒಂದಿಷ್ಟು ಉತ್ತೇಜಕ ಮಾತುಗಳನ್ನು ಆಡಲಿದ್ದು, ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾರ್ಗದರ್ಶನ ನೀಡಲಿದ್ದಾರೆ. ಇದಾದ ಬಳಿಕ ಸಂಜೆ ರಾಜೀವ್ ಗಾಂಧಿ ಭವನದಲ್ಲಿ ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕದ ನಾಯಕರ ಜೊತೆ ರಾಹುಲ್ ಸಭೆ ನಡೆಸಲಿದ್ದಾರೆ. ಸಂಜೆ 5.30 ರ ವರೆಗೂ ಸಭೆ ನಡೆಸಿ ನಂತರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಸಮಾರಂಭದ ಆರಂಭದಲ್ಲಿ ವಂದೇ ಮಾತರಂ ಗೀತೆ ಹಾಡಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾತನಾಡಿ, ಪಕ್ಷ ಬಿಟ್ಟು ಹೋದವರನ್ನು ಸೆಳೆಯಬೇಕು. ಸೇವಾದಳದ ತರಬೇತಿ ಪ್ರಮುಖವಾಗಿಸಬೇಕು. ಕಾಂಗ್ರೆಸ್ ಪಕ್ಷದ ಮೂರನೇ ಹಾಗೂ ನಾಲ್ಕನೇ ಹಂತದ ನಾಯಕರನ್ನು ರೂಪಿಸುವ ಹಾಗೂ ಅವರ ಬಲ ಹೆಚ್ಚಿಸುವ ಕಾರ್ಯ ಆಗಬೇಕು ಎಂದು ಸಲಹೆ ಇತ್ತರು.

ಇದನ್ನೂ ಓದಿ: ಒಬ್ಬ ವಿದ್ಯಾರ್ಥಿಯ ಪರೀಕ್ಷೆಗಾಗಿ 10ಕ್ಕೂ ಹೆಚ್ಚು ಸಿಬ್ಬಂದಿ ಕಾದು ಕುಳಿತಿದ್ದು ಕೊನೆಗೂ ವ್ಯರ್ಥ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.