ETV Bharat / state

ಏಪ್ರಿಲ್​ 5ರಂದು ಕರ್ನಾಟಕಕ್ಕೆ ಬರಲಿದ್ದಾರೆ ರಾಹುಲ್​ ಗಾಂಧಿ - ಈಟಿವಿ ಭಾರತ ಕನ್ನಡ

ಕಾಂಗ್ರೆಸ್ ನಾಯಕ​ ರಾಹುಲ್​ ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದು, ಅನರ್ಹತೆ ವಿರುದ್ಧ ಮುಂದಿನ ಹೋರಾಟದ ರೂಪುರೇಷೆಗೆ ಸಿದ್ಧತೆ ನಡೆಯಲಿದೆ ಎಂದು ತಿಳಿದುಬಂದಿದೆ.

rahul-to-visit-karnataka-on-april-5
ಎಪ್ರಿಲ್​ 5ರಂದು ಕರ್ನಾಟಕಕ್ಕೆ ರಾಹುಲ್​ ಗಾಂಧಿ : ಅನರ್ಹ ಸಂಬಂಧ ಪ್ರತೀಕಾರ
author img

By

Published : Mar 28, 2023, 1:13 PM IST

Updated : Mar 28, 2023, 3:09 PM IST

ಬೆಂಗಳೂರು : ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಏಪ್ರಿಲ್​ 5ಕ್ಕೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಕೋಲಾರದಲ್ಲಿ ಕಾಂಗ್ರೆಸ್​ ಹಮ್ಮಿಕೊಳ್ಳುವ ಬೃಹತ್​ ಸಮಾವೇಶ ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಸೂರತ್​ ಜಿಲ್ಲಾ ನ್ಯಾಯಾಲಯ ರಾಹುಲ್​ ಗಾಂಧಿಯನ್ನು ದೋಷಿ ಎಂದು ತೀರ್ಪು ನೀಡಿ ಎರಡು ವರ್ಷ ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ವಯನಾಡು​ ಸಂಸತ್​ ಸದಸ್ಯ ಸ್ಥಾನದಿಂದ ಅವರನ್ನು ಅನರ್ಹಗೊಳಿಸಲಾಗಿತ್ತು. ಇದನ್ನು ಖಂಡಿಸಿ ಕಾಂಗ್ರೆಸ್‌ ಅಂದು ಭಾಷಣ ಮಾಡಿದ ಸ್ಥಳದಲ್ಲೇ ಮತ್ತೆ ರಾಹುಲ್‌ರನ್ನು ಕರೆಸಿ ಬೃಹತ್​ ಕಾರ್ಯಕ್ರಮ ನಡೆಸಲು ಯೋಜನೆ ರೂಪಿಸಿದೆ.

2019ರ ಏಪ್ರಿಲ್​ 13ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಪರವಾಗಿ ರಾಹುಲ್​ ಮತಯಾಚನೆ ಮಾಡಿದ್ದರು. ಬಳಿಕ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಭಾಷಣ ಮಾಡಿದ್ದರು. ಈ ವೇಳೆ ವಾಗ್ದಾಳಿ ನಡೆಸಿದ್ದ ಅವರು, ಮೋದಿ ಉಪನಾಮದ ಬಗ್ಗೆ ಹೇಳಿಕೆ ನೀಡಿದ್ದರು. ನೀರವ್​ ಮೋದಿ, ಲಲಿತ್​ ಮೋದಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮಗಳನ್ನು ಹೋಲಿಕೆ ಮಾಡಿ ಹೇಳಿಕೆ ನೀಡಿದ್ದರು. 'ನೀರವ್​ ಮೋದಿ, ಲಲಿತ್​ ಮೋದಿ, ನರೇಂದ್ರ ಮೋದಿ... ಇವರೆಲ್ಲರಿಗೂ ಮೋದಿ ಎಂಬ ಉಪನಾಮ ಇರುವುದು ಹೇಗೆ?. ಎಲ್ಲಾ ಕಳ್ಳರು ಮೋದಿ ಉಪನಾಮ ಹೊಂದಿರುವುದು ಹೇಗೆ?' ಎಂದು ವ್ಯಂಗ್ಯವಾಡಿದ್ದರು. ಈ ಬಗ್ಗೆ ರಾಹುಲ್​ ಗಾಂಧಿ ವಿರುದ್ಧ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಬಳಿಕ ಪ್ರಕರಣದ ವಿಚಾರಣೆ ನಡೆಸಿದ ಸೂರತ್​ ಜಿಲ್ಲಾ ನ್ಯಾಯಾಲಯ ರಾಹುಲ್​ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು.

ಹೀಗಾಗಿ ಕೋಲಾರದಲ್ಲಿ ಭಾಷಣ ಮಾಡಿದ ಸ್ಥಳದಿಂದಲೇ ರಾಹುಲ್ ಗಾಂಧಿ ಅವರ ಅನರ್ಹತೆ ವಿರೋಧಿ ಪ್ರತಿಭಟನೆ ತೀವ್ರಗೊಳಿಸಲು ಕಾಂಗ್ರೆಸ್ ಮುಂದಾಗಿದೆ. ಈ ಸಂಬಂಧ ಏಪ್ರಿಲ್ 5ರಂದು ಬೃಹತ್​ ಕಾರ್ಯಕ್ರಮ ಆಯೋಜಿಸಿ ರಾಹುಲ್ ಗಾಂಧಿ ಅವರನ್ನು ಕರೆಸಿ ಭಾಷಣ ಮಾಡಿಸಲು ಪಕ್ಷ ಯೋಜಿಸಿದೆ ಎಂದು ತಿಳಿದುಬಂದಿದೆ.

ರಾಹುಲ್​ ಅನರ್ಹಗೊಳಿಸಿದ್ದಕ್ಕೆ ಕಾಂಗ್ರೆಸ್​ ಪ್ರತಿಭಟನೆ : ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿತ್ತು. ರಾಷ್ಟ್ರ ರಾಜಧಾನಿ ರಾಜ್​ಘಾಟ್​ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಜೈರಾಮ್ ರಮೇಶ್, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಇತರೆ ನಾಯಕರು ಭಾಗಿಯಾಗಿದ್ದರು.

ಲೋಕಸಭಾ ಸದಸ್ಯರಾಗಿ ಅನರ್ಹಗೊಂಡ ಬಳಿಕ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಗೌತಮ್ ಅದಾನಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. "ನಾನು ದೇಶದ ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತಿದ್ದೇನೆ, ಯಾರಿಗೂ ಹೆದರುವುದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ : ಸರ್ಕಾರಿ ಬಂಗಲೆ ಖಾಲಿ ಮಾಡಲು ರಾಹುಲ್​ ಗಾಂಧಿಗೆ ನೋಟಿಸ್​ ಜಾರಿ

Last Updated : Mar 28, 2023, 3:09 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.