ETV Bharat / state

ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ : ಹವಾಮಾನ ಇಲಾಖೆ - ಕರ್ನಾಟಕಕ್ಕೆ ಮಳೆ ಮುನ್ಸೂಚನೆ

ಜುಲೈ 8 ಹಾಗೂ 9ರಂದು ರಾಜ್ಯಾದ್ಯಂತ ಮಳೆ ವಿಂಗಡಣೆ ಹಾಗೂ ತೀವ್ರತೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಭಾರಿ ಹಾಗೂ ಅತಿ ಭಾರಿ ಮಳೆ ಸಾಧ್ಯತೆ ಇದೆ. ಜುಲೈ 8ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ..

Rain alert in Karnataka news
ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ
author img

By

Published : Jul 7, 2021, 5:58 PM IST

Updated : Jul 7, 2021, 8:37 PM IST

ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯೆತೆ ಇದೆ. ಜುಲೈ 9ರಿಂದ ಜುಲೈ 11ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿಕೆ

ಕಾಬುಲ್ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಬಂಗಾಳ ಉಪಸಾಗರದಲ್ಲಿ ಜುಲೈ 11ರಂದು ವಾಯುಭಾರ ಕುಸಿತವಾಗುವ ಹೆಚ್ಚಿನ ಸಾಧ್ಯತೆ ಇದೆ. ಈ ಪ್ರಭಾವದಿಂದ ಜುಲೈ 8ರಿಂದ 11ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗಿನಿಂದ ಕೂಡಿದ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಜುಲೈ 8 ಹಾಗೂ 9ರಂದು ರಾಜ್ಯಾದ್ಯಂತ ಮಳೆ ವಿಂಗಡಣೆ ಹಾಗೂ ತೀವ್ರತೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಭಾರಿ ಹಾಗೂ ಅತಿ ಭಾರಿ ಮಳೆ ಸಾಧ್ಯತೆ ಇದೆ. ಜುಲೈ 8ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದಿದ್ದಾರೆ.

ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಕೆಲವೆಡೆ ಜುಲೈ 8ರಂದು ಸಾಧಾರಣದಿಂದ ಭಾರಿ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಬೀದರ್, ಕಲಬುರ್ಗಿ, ಯಾದಗಿರಿ, ಬೆಳಗಾವಿ ಜಿಲ್ಲೆಗಳಲ್ಲಿ ಕೆಲವೆಡೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಜುಲೈ 8 ಮತ್ತು 9ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹೇಳಿದ್ದಾರೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಬುಧವಾರ ವ್ಯಾಪಕ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಮುಖ್ಯವಾಗಿ, ಕೋಲಾರದಲ್ಲಿ 6 ಸೆಂ.ಮೀ, ಬೀದರ್‌ನಲ್ಲಿ 4 ಸೆಂ.ಮೀ, ಗದಗದ ನರಗುಂದದಲ್ಲಿ 3 ಸೆಂ.ಮೀ. ಮಳೆಯಾಗಿದೆ ಎಂದು ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

Last Updated : Jul 7, 2021, 8:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.