ETV Bharat / state

ಮಳೆಗೆ ಹಾನಿಯಾಗಿರುವ ಮನೆಗಳಿಗೆ ಪಾಲಿಕೆಯಿಂದ 10 ಸಾವಿರ ಪರಿಹಾರ:ತುಷಾರ್ ಗಿರಿನಾಥ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಈಗಾಗಲೇ ಮಳೆಯಿಂದ ಹಾನಿಯಾಗಿರುವ ಮನೆಗಳಿಗೆ ಬಿಬಿಎಂಪಿಯಿಂದ 10 ಸಾವಿರ ರೂ. ಪರಿಹಾರ ಧನ ಕೊಡುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದ್ದಾರೆ.

Etv BharatKN_BNG_05_BBMP_CHIEF_COMISSIONER_PRESS_MEET_UPDATED_7210969
Etv Bharaತುಷಾರ್ ಗಿರಿನಾಥ್t
author img

By

Published : Aug 3, 2022, 7:28 PM IST

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲ ಆರಂಭವಾದಾಗಿನಿಂದ ಇಲ್ಲಿನ ನಿವಾಸಿಗಳು ಹಲವು ಸಮಸ್ಯೆಗಳನ್ನು ಎದುರಿಸಿದ್ದಾರೆ. ಕೆಲವೆಡೆ ಮನೆಗಳಿಗೆ ನೀರು ನುಗ್ಗಿದ್ದರಿಂದ ಇನ್ನಿಲ್ಲದ ಸಂಕಷ್ಟ ಅನುಭವಿಸಿದ್ದಾರೆ. ಮತ್ತೆ ಕೆಲವೆಡೆ ಹಾನಿಯಾಗಿರುವ ಮನೆಗಳಿಗೆ ತಲಾ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಹೆಚ್ಚು ಮಳೆಯಾಗುತ್ತಿದೆ. ಬೆಂಗಳೂರು ಪೂರ್ವ ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ. ಅದರಲ್ಲೂ ಹೆಬ್ಬಾಳ, ಕೆಆರ್ ಪುರಂ ಭಾಗದಲ್ಲಿ ಹಾಗೂ ಹೆಚ್‌ಎಸ್​ಆರ್ ಲೇಔಟ್ ಭಾಗದಲ್ಲಿ ಹೆಚ್ಚು ಮಳೆಯಾಗಿದೆ ಎಂದರು.

ಆಗಸ್ಟ್ 5ರವರೆಗೂ ನಗರದಲ್ಲಿ ಮಳೆಯಾಗಲಿದ್ದು, ಈಗಾಗಲೇ ಮಳೆಯಿಂದ ಸಾಯಿ ಲೇಔಟ್​ನಲ್ಲಿ ಮನೆಗಳು, ಪೈ ಲೇಔಟ್, ನಾಗಪ್ಪರೆಡ್ಡಿ ಲೇಔಟ್​ನಲ್ಲಿರುವ ಮನೆಗಳಲ್ಲಿ ಮಳೆ ನೀರು ತುಂಬಿದೆ. ಆ ಭಾಗದಲ್ಲಿ ಪಂಪಿಂಗ್‌ ಮಾಡುವ ಮೂಲಕ ನೀರು ಹೊರ ತೆಗೆದುಹಾಕುವ ಕೆಲಸ ಮಾಡಲಾಗುತ್ತಿದೆ. ಶಾಶ್ವತ ಪರಿಹಾರಕ್ಕಾಗಿ ಕಾಮಗಾರಿ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಮುಂದಿನ ಮಳೆಗಾಲಕ್ಕೆ ಯಾವುದೇ ಪ್ರವಾಹ ಆಗದ ಹಾಗೆ ನೋಡಿಕೊಳ್ಳಲಾಗುತ್ತದೆ. ಕಳೆದ ಐದು ತಿಂಗಳಲ್ಲಿ ನಾಲ್ಕನೇ ಬಾರಿ ಮಳೆ ಪರಿಹಾರ ನೀಡಲಾಗುತ್ತಿದೆ. ಬಿಬಿಎಂಪಿಯಿಂದ 10 ಸಾವಿರ ರೂಪಾಯಿ ಪರಿಹಾರ ನಿಗದಿ ಮಾಡಲಾಗಿದೆ ಎಂದು ಹೇಳಿದರು.

ಹೊರ ರಾಜ್ಯದ ಪ್ರಯಾಣಿಕರ ಮೇಲೆ ನಿಗಾ: ಮಂಕಿಪಾಕ್ಸ್ ಕಾಯಿಲೆ ಸಂಬಂಧ ಕೇರಳ ಹಾಗೂ ಹೊರ ರಾಜ್ಯದಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕೋಲಾರದಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು, ಬೆಳೆಯೂ ನಾಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.