ಬೆಂಗಳೂರು: ಕಳೆದ ಎರಡು ದಿನಗಳಿಂದ ಸಂಜೆಯಾಗುತ್ತಲೇ ಮಳೆರಾಯ ಅಬ್ಬರಿಸುತ್ತಿದ್ದ. ಇಂದು ಮಧ್ಯಾಹ್ನದಿಂದಲೇ ಮಳೆ ಶುರುವಾಗಿದೆ.
ನಗರದ ಫ್ರೀಡಂ ಪಾರ್ಕ್, ಕೆ.ಆರ್.ವೃತ್ತ, ಕಾರ್ಪೋರೇಷನ್ ವೃತ್ತ, ಮೈಸೂರು ರಸ್ತೆ, ಜಯನಗರ, ಲಾಲ್ ಬಾಗ್ ರಸ್ತೆಯಲ್ಲಿ ಮಳೆಯಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.