ಬೆಂಗಳೂರು: ನಗರದ ಬಹುತೇಕ ಪ್ರದೇಶಗಳಲ್ಲಿ ಬುಧವಾರ ಸಂಜೆ ಜೋರು ಮಳೆ ಸುರಿಯಿತು. ಬೆಳಗ್ಗೆಯಿಂದ ಬಿಸಿಲು ಹಾಗೂ ಕೆಲ ಬಾರಿ ಮೋಡ ಕವಿದ ವಾತಾವರಣವಿತ್ತು.
ಆರ್ಆರ್ ನಗರ, ಬಿಟಿಎಂ ಲೇಔಟ್, ರಾಜಾಜಿನಗರ, ಮಲ್ಲೇಶ್ವರ, ಬಸವನಗುಡಿ, ಯಶವಂತಪುರ, ಕೆಆರ್ ಮಾರ್ಕೆಟ್, ಕಾರ್ಪೊರೇಷನ್ ವೃತ್ತ ಲಾಲ್‌ಬಾಗ್, ಶಾಂತಿನಗರದಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ, ಉತ್ತರ ಒಳನಾಡಿನ ಕೆಲವೆಡೆ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 13ರಿಂದ ಮೇ 14ರವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಮಾಹಿತಿ ನೀಡಿದೆ.
ಉಳಿದಂತೆ, ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ 40.5 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಮತ್ತು ಕನಿಷ್ಠ ಉಷ್ಣಾಂಶ 24 ಡಿಗ್ರಿ, ಯಾದಗಿರಿಯಲ್ಲಿ ಗರಿಷ್ಠ 38 ಡಿಗ್ರಿ ಮತ್ತು ಕನಿಷ್ಠ 27 ಡಿಗ್ರಿ, ವಿಜಯಪುರ ಗರಿಷ್ಠ 37.6 ಡಿಗ್ರಿ ಹಾಗೂ ಕನಿಷ್ಠ 23.1 ಡಿಗ್ರಿ, ಬೀದರ್‌ನಲ್ಲಿ ಗರಿಷ್ಠ 37 ಡಿಗ್ರಿ ಹಾಗೂ ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ತಿಳಿಸಿದೆ.
ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಮಾಹಿತಿ:
ಕಲಬುರ್ಗಿ: 40.5-27
ರಾಯಚೂರು: 39-24
ಯಾದಗಿರಿ: 38-27
ವಿಜಯಪುರ: 37.6-23.1
ಬೀದರ್: 37-26
ಮಡಿಕೇರಿ: 35.5-21.5