ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಇಂದು ಸೇರಿದಂತೆ ಇನ್ನೂ ಎರಡು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ವೈಪರೀತ್ಯದಿಂದ ಮಲೆನಾಡಿನ ವಿವಿಧ ಭಾಗಗಳಲ್ಲಿ ಬುಧವಾರ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗಿತ್ತು.
ಇಂದು ಹಾಗೂ ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ ಎಂದು ಇಲಾಖೆಯು ಮೂನ್ಸೂಚನೆ ನೀಡಿದೆ.
ನಿನ್ನೆ ಶಿವಮೊಗ್ಗದ ಸಾಗರ ತಾಲೂಕಿನಲ್ಲಿ ಭಾರಿ ಮಳೆ ಸುರಿದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಬಿದ್ದಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದೆ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಸ್ಕೂಟಿಯಲ್ಲಿ ಬರುತ್ತಿದ್ದಾಗಲೇ ಟ್ರಾನ್ಸ್ಫಾರ್ಮರ್ ಸ್ಫೋಟ: ಚಿಕಿತ್ಸೆ ಫಲಿಸದೇ ಅಪ್ಪ, ಮಗಳು ಸಾವು