ETV Bharat / state

ರಾಜ್ಯದಲ್ಲಿ ಸೆಪ್ಟೆಂಬರ್ 2ರವರೆಗೆ ಮಳೆ.. ಹವಾಮಾನ ಇಲಾಖೆ ಮುನ್ಸೂಚನೆ - ಈಟಿವಿ ಭಾರತ ಕನ್ನಡ

ನೆರೆ ರಾಜ್ಯವಾದ ಆಂಧ್ರಪ್ರದೇಶದ ಕರಾವಳಿಯಲ್ಲಿ, ಬಂಗಾಳ ಕೊಲ್ಲಿ ಸಮುದ್ರದ ಮಧ್ಯಭಾಗ ಹಾಗೂ ಕೇರಳದ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದೆ.

Rain in the state till September 2
ರಾಜ್ಯದಲ್ಲಿ ಸೆಪ್ಟೆಂಬರ್ 2ರವರೆಗೆ ಮಳೆ
author img

By

Published : Aug 29, 2022, 12:26 PM IST

ಬೆಂಗಳೂರು: ಹವಾಮಾನದಲ್ಲಿ ಉಂಟಾದ ವೈಪರೀತ್ಯಗಳಿಂದ ಕರ್ನಾಟಕದ ಎಲ್ಲ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಸೆಪ್ಟೆಂಬರ್ 2ರವರೆಗೆ ಸಾಧಾರಣದಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೆರೆ ರಾಜ್ಯವಾದ ಆಂಧ್ರಪ್ರದೇಶದ ಕರಾವಳಿಯಲ್ಲಿ, ಬಂಗಾಳ ಕೊಲ್ಲಿ ಸಮುದ್ರದ ಮಧ್ಯಭಾಗ ಹಾಗೂ ಕೇರಳದ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದೆ. ಇದರ ತೀವ್ರತೆ ಭಾನುವಾರದಿಂದ ಹೆಚ್ಚಾಗಿದ್ದು, ಮುಂದಿನ ಐದು ದಿನ ಅದರ ತೀವ್ರತೆ ಮುಂದುವರಿಯುವ ಲಕ್ಷಣಗಳು ಇವೆ ಎಂದಿದೆ.

ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಚಿಕ್ಕ ಮಗಳೂರು, ಶಿವಮೊಗ್ಗ, ರಾಮನಗರ ಸೇರಿದಂತೆ ಬಹುತೇಕ ಎಲ್ಲ ಕಡೆಗಳಲ್ಲಿ ಮುಂದಿನ ಮೂರು ದಿನ ಜೋರು ಮಳೆ ಅಬ್ಬರಿಸಲಿದೆ. ನಂತರ ಸ್ವಲ್ಪ ಪ್ರಮಾಣದಲ್ಲಿ ಮಳೆ ಕಡಿಯಾಗಲಿದೆ. ಹೀಗಾಗಿ ಇಷ್ಟು ಜಿಲ್ಲೆಗಳಿಗೆ ಸೆಪ್ಟೆಂಬರ್ 1ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದೆ.

ಉತ್ತರ ಒಳನಾಡಿನಲ್ಲೂ 'ಯೆಲ್ಲೋ ಅಲರ್ಟ್': ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳ ಹಲವೆಡೆ ಮೂರು ದಿನ ಮಳೆ ಅಬ್ಬರಿಸಲಿದೆ. ಇಂದಿಂದ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದ ದಿನಗಳಲ್ಲಿ ಇದೇ ಭಾಗದಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳಲಿದೆ ಎಂದು ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಲೀಲೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.