ETV Bharat / state

ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆ ಸಾಧ್ಯತೆ

ಮಾನ್ಸೂನ್ ದುರ್ಬಲವಾಗಿದ್ದರೂ ಕರಾವಳಿಯಲ್ಲಿ ಹೆಚ್ಚು ಸ್ಥಳಗಳಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ವರೆಗೆ ಮಳೆಯಾಗುವ ಹೆಚ್ಚಿನ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆ ಸಾಧ್ಯತೆ
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆ ಸಾಧ್ಯತೆ
author img

By

Published : Aug 25, 2021, 8:17 PM IST

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡಿನಲ್ಲಿ ಬುಧವಾರ ನೈಋತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಮಾತ್ರ ವ್ಯಾಪಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಾನ್ಸೂನ್ ದುರ್ಬಲವಾಗಿದ್ದರೂ ಕರಾವಳಿಯ ಹೆಚ್ಚು ಸ್ಥಳಗಳಲ್ಲಿ ಮಳೆಯಾಗಿದೆ. ತೊಂಡೇಭಾವಿಯಲ್ಲಿ 13 ಸೆಂ.ಮೀ, ಚಿಕ್ಕಬಳ್ಳಾಪುರದಲ್ಲಿ 11 ಸೆಂ.ಮೀ, ಕೋಲಾರದ ಮುಳಬಾಗಲಿನಲ್ಲಿ 10 ಸೆಂ.ಮೀ, ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ 8 ಸೆಂ.ಮೀ, ಗೌರಿಬಿದನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ.

ಕೋಲಾರ ಜಿಲ್ಲೆ ರಾಯಲ್ಪಾಡುನಲ್ಲಿ 6 ಸೆಂ.ಮೀ, ಚಿಂತಾಮಣಿಯಲ್ಲಿ 5 ಸೆಂ.ಮೀ, ಬೀದರ್‌ನ ಜನವಾಡದಲ್ಲಿ 4 ಸೆಂ.ಮೀ, ಕೊಲ್ಲೂರು, ಭಾಲ್ಕಿ, ಮಹಾಗಾಂವ್, ಕಲಬುರ್ಗಿ, ದೇವನಹಳ್ಳಿ, ಚಿಂತಾಮಣಿ, ಹೆಸರಘಟ್ಟದಲ್ಲಿ ತಲಾ 3 ಸೆಂ.ಮೀ ಮಳೆ ಸುರಿದಿದೆ.

ಆ.26 ರಿಂದ 29 ರ ವರೆಗೆ ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲ ಸ್ಥಳಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಆ.27 ಹಾಗೂ 28ರಂದು ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ವರೆಗೆ ಮಳೆಯಾಗುವ ಹೆಚ್ಚಿನ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.