ಬೆಂಗಳೂರು: ಉತ್ತರ ಒಳನಾಡು ಹಾಗೂ ಮಲೆನಾಡಿನ ಭಾಗದಲ್ಲಿ ತುಂತುರು ಮಳೆ ಆಗಲಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಜೋರು ಮಳೆಯಾಗುವ ಸಂಭವವಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಪ್ರಮಾಣ ಬಹುತೇಕ ಕ್ಷೀಣಿಸಿದೆ. ಆದರೆ ಕರಾವಳಿ ಭಾಗದಲ್ಲಿ ಸೆಪ್ಟೆಂಬರ್ 16ರವರೆಗೆ ಗುಡುಗು, ಮಿಂಚಿನಿಂದ ಕೂಡಿದ ಮಳೆ ಆಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಂದೆರಡು ಕಡೆ ಎರಡು ದಿನ ಸಾಧಾರಣದಿಂದ ಭಾರಿ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ದಕ್ಷಿಣ ಒಳನಾಡಿನಲ್ಲಿ ಮಳೆ: ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರದಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಮಳೆ ನೀರಿನಿಂದ ಅಡಕೆ ತೋಟ ಜಲಾವೃತ: ಮಳೆನೀರಿನ ನಡುವೆ ಅಡಕೆ ಕೊಯ್ಲು ಮಾಡಿದ ರೈತ