ಬೆಂಗಳೂರು: ರಾಜಧಾನಿ ಸೇರಿದಂತೆ ಕಳೆದ ಕೆಲವು ದಿನಗಳಿಂದ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಇನ್ನೂ ಕೆಲವು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆ ಸಿಲಿಕಾನ್ ಸಿಟಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ನಾಳೆಯವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹೇಳಿದೆ.
ಬೆಂಗಳೂರಿನ ತಗ್ಗು ಪ್ರದೇಶದ ನಿವಾಸಿಗಳು ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಹಲವಾರು ಬಡಾವಣೆಗಳಿಗೆ ನೀರು ನುಗ್ಗಿ ರಸ್ತೆಗಳು ಜಲಾವೃತಗೊಂಡಿದ್ದವು. ಐಟಿ ಹಬ್ ಬೆಳ್ಳಂದೂರಿನಲ್ಲಿ ಮನೆಗಳು ಹಾಗೂ ಅಪಾರ್ಟ್ಮೆಂಟ್ಗಳಿಗೆ ನೀರು ನುಗ್ಗಿ ಹಲವು ಕಾರುಗಳು ಮುಳುಗಿರುವುದು ವರದಿಯಾಗಿತ್ತು.
ಇದನ್ನೂ ಓದಿ: 5 ದಿನ ರಾಜ್ಯದಲ್ಲಿ ಭಾರಿ ಮಳೆ: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್