ETV Bharat / state

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಇನ್ನೂ ಐದು ದಿನ ಅಲ್ಲಲ್ಲಿ ಮಳೆ - ಹವಾಮಾನ ಮುನ್ಸೂಚನೆ ವಿಭಾಗ

ಬೆಂಗಳೂರು ಸೇರಿದಂತೆ ಮುಂದಿನ ಐದು ದಿನಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಐದು ದಿನ ಅಲ್ಲಲ್ಲಿ ಮಳೆ
Rainfall next five days
author img

By

Published : Nov 27, 2020, 4:42 PM IST

ಬೆಂಗಳೂರು: ಇಂದು ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

ಹವಾಮಾನ ಮುನ್ಸೂಚನೆ ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್

ಈ ಕುರಿತು ಹವಾಮಾನ ಮುನ್ಸೂಚನೆ ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದು, ಚಿಂತಾಮಣಿಯಲ್ಲಿ 6 ಸೆಂ.ಮೀ., ಕೋಲಾರದಲ್ಲಿ 5 ಸೆಂ.ಮೀ. ಮಳೆಯಾಗಿದೆ. ಈಗಿರುವ ವಾತಾವರಣದ ಪ್ರಕಾರ ಬಂಗಾಳ ಉಪಸಾಗರದಲ್ಲಿ ಆಗ್ನೇಯ ಭಾಗದಲ್ಲಿ ಮುಂದಿನ 48 ಗಂಟೆಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಇನ್ನೊಂದೆಡೆ ದಕ್ಷಿಣ ಆಂಧ್ರ ಪ್ರದೇಶದ ಕರಾವಳಿಯಲ್ಲಿ ವಾಯುಭಾರತ ಕುಸಿತವಾಗಿದ್ದು, ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಡಿ. 1ರವರೆಗೆ ಅಲ್ಲಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ನ. 29ರವರೆಗೆ ಅಲ್ಲಲ್ಲಿ ಮಳೆಯಾಗಲಿದ್ದು, ನ. 30, ಡಿ. 1ರ ನಂತರ ಒಣಹವೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಅಲ್ಲಲ್ಲಿ ಹಗುರ ಮಳೆ ನಂತರ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಕೆಲವು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಮುಂಜಾನೆ ಮಂಜು ಬೀಳುವ ಸಾಧ್ಯತೆ ಇದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.