ETV Bharat / state

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ ಮೂರು ದಿನ ರಾಜ್ಯಾದ್ಯಂತ ಮಳೆ - ಕರಾವಳಿ, ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಮುಂದುವರೆದಿದ್ದು, ಇದು ಇನ್ನಷ್ಟು ಪ್ರಬಲವಾಗುವ ಕಾರಣದಿಂದಾಗಿ ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.‌

ಮಳೆ
ಮಳೆ
author img

By

Published : Mar 19, 2022, 9:43 AM IST

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಇಂದಿನಿಂದ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮಧ್ಯ ಕರ್ನಾಟಕದ ಬಯಲುಸೀಮೆ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 20 (ನಾಳೆ) ಬಯಲು ಸೀಮೆಯ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆ ಕುರಿತು ಮಾಹಿತಿ ನೀಡಿರುವ ಹವಾಮಾನ ತಜ್ಞ ಸದಾನಂದ ಅಡಿಗ

ಈ ಕುರಿತು ಮಾಹಿತಿ ನೀಡಿರುವ ಹವಾಮಾನ ತಜ್ಞ ಸದಾನಂದ ಅಡಿಗ, ಇಂದು ಕರಾವಳಿ ಭಾಗ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. 20, 21 ಮತ್ತು 22 ರಂದು ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ಇದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ನಾಳೆ ಬೆಳಗಾವಿ, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ವಿಜಯಪುರದಲ್ಲಿ ಮಳೆಯಾಗಲಿದೆ ಎಂದಿದ್ದಾರೆ.

22 ರಂದು ಗದಗ ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿಯ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂ. ಗ್ರಾಮಾಂತರ, ತುಮಕೂರು ಸೇರಿದಂತೆ ಇಂದು ಮಳೆಯ ಸಿಂಚನವಾಗಲಿದೆ.‌ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹೊರತು ಪಡಿಸಿ ಉಳಿದೆಲ್ಲ ಭಾಗದಲ್ಲಿ ಮಳೆಯಾಗಲಿದೆ. ಪರಿಣಾಮ ಗರಿಷ್ಠ ಉಷ್ಣಾಂಶದಲ್ಲಿ ಏರುಪೇರು ಆಗಲಿದೆ ಎಂದು ಮಾಹಿತಿ ನೀಡಿದರು.

ಕರಾವಳಿ, ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ನಿನ್ನೆ ಕಾರವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗಿದೆ. ಭಾನುವಾರ ಸಹ ಈ ಎರಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಮರಿಯುಪೋಲ್ ಥಿಯೇಟರ್ ಮೇಲೆ ಬಾಂಬ್ ದಾಳಿ: ಅವಶೇಷಗಳಡಿ ಸಿಲುಕಿದ 1300 ಕ್ಕೂ ಹೆಚ್ಚು ನಾಗರಿಕರು,130 ಮಂದಿ ರಕ್ಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.