ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾತ್ರಿ ವೇಳೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇಂದು ಸುಳ್ಯದಲ್ಲಿ 2 ಸೆಂ.ಮೀ. ಹಾಗೂ ಭಾಗಮಂಡಲದಲ್ಲಿ 1 ಸೆಂ.ಮೀ. ಮಳೆಯಾಗಿದೆ.