ETV Bharat / state

ಬೆಂಗಳೂರಿನಲ್ಲಿ ನಾಳೆಯೂ ಮಳೆ ಸಾಧ್ಯತೆ.. ಹವಾಮಾನ ಇಲಾಖೆ ಮಾಹಿತಿ - ಪ್ರಾದೇಶಿಕ ಹವಾಮಾನ ಮುನ್ಸೂಚನೆ ವಿಭಾಗದ ನಿರ್ದೇಶಕ ಸಿ.ಎಸ್ ಪಾಟೀಲ್

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 6ರಂದು ಹಲವು ಸ್ಥಳಗಳಲ್ಲಿ ಮಳೆಯಾಗಲಿದ್ದು, ನ.7-8 ರಂದು ಕೆಲವು ಕಡೆ ಮಾತ್ರ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ನ.6,7,8 ರಂದು ಕೆಲವೊಂದು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ನ.6 ರಿಂದ 10ರ ವರೆಗೆ ಒಣಹವೆ ಮುಂದುವರಿಯಲಿದೆ..

Bangalore rain
ಬೆಂಗಳೂರು ಮಳೆ
author img

By

Published : Nov 6, 2020, 6:36 PM IST

ಬೆಂಗಳೂರು: ಇಂದು ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಕಡೆ ಮಳೆಯಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ ಎಂದು ಪ್ರಾದೇಶಿಕ ಹವಾಮಾನ ಮುನ್ಸೂಚನೆ ಇಲಾಖೆ ವಿಭಾಗದ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದರು.

ಬಂಡೀಪುರದಲ್ಲಿ 7 ಸೆಂ.ಮೀ, ಚಾಮರಾಜನಗರದಲ್ಲಿ 3 ಸೆಂ.ಮೀ, ಹೆಚ್​​​​.ಡಿ ಕೋಟೆಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಲಕ್ಷದ್ವೀಪದಿಂದ ಕರ್ನಾಟಕದ ಕರಾವಳಿಯವರೆಗೆ ಟ್ರಫ್ (ವಾತಾವರಣದಲ್ಲಿ ಗಾಳಿಯ ಚಲನೆ) ನಿರ್ಮಾಣವಾಗಿರುವುದರಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ ಎಂದು ಸಿಎಸ್ ಪಾಟೀಲ್ ತಿಳಿಸಿದರು.

ಪ್ರಾದೇಶಿಕ ಹವಾಮಾನ ಮುನ್ಸೂಚನೆ ವಿಭಾಗದ ನಿರ್ದೇಶಕ ಸಿ.ಎಸ್ ಪಾಟೀಲ್

ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮಳೆಯಾಗಿದ್ದು, ನ.7-8 ರಂದು ಕೆಲವು ಕಡೆ ಮಾತ್ರ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ನ.6,7,8 ರಂದು ಕೆಲ ಕಡೆ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ನ.6 ರಿಂದ 10ರವರೆಗೆ ಒಣಹವೆ ಮುಂದುವರಿಯಲಿದೆ.

ರಾಜ್ಯಾದ್ಯಂತ ನ.9 ಹಾಗೂ 10 ರಂದು ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ನ. 7 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಸಿ.ಎಸ್ ಪಾಟೀಲ್ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.