ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಸಂಜೆ ವೇಳೆ ಮನೆಕಡೆ ತೆರಳುವ ಜನರು ವರ್ಷಧಾರೆಯಿಂದ ತೊಂದರೆ ಅನುಭವಿಸುವಂತಾಗಿದೆ.
ನಗರದ ಫ್ರೀಡಂ ಪಾರ್ಕ್, ಕೆ.ಆರ್.ವೃತ್ತ, ಕಾರ್ಪೋರೇಷನ್ ವೃತ್ತ, ಮೈಸೂರು ರಸ್ತೆ, ಜಯನಗರ, ಲಾಲ್ ಬಾಗ್, ಮಲ್ಲೇಶ್ವರಂ, ಶಿವಾನಂದ ವೃತ್ತ, ಯಶವಂತಪುರ, ಇಂದಿರಾ ನಗರದಲ್ಲಿ ನಿನ್ನೆ ಮಳೆಯಾಗಿದೆ.
ಇನ್ನೂ ಎರಡು ದಿನ ನಗರದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.