ETV Bharat / state

ತಿಂಗಳಾಂತ್ಯಕ್ಕೆ ರಾಜ್ಯದಲ್ಲಿ 'ರೈತ ಶಕ್ತಿ ಯೋಜನೆ' ಜಾರಿ: ರೈತರಿಗೆ ಸಿಗಲಿದೆ ಡೀಸೆಲ್ ಸಹಾಯಧನ - ETv Bharat kannada news

ರೈತರ ಆರ್ಥಿಕ ಹೊರೆಯನ್ನು ಕಡಿತಗೊಳಿಸುವ ಉದ್ದೇಶವನ್ನು 'ರೈತ ಶಕ್ತಿ ಯೋಜನೆ' ಹೊಂದಿದೆ.

CM Basavaraja Bommai
ಸಿಎಂ ಬಸವರಾಜ ಬೊಮ್ಮಾಯಿ
author img

By

Published : Jan 17, 2023, 11:36 AM IST

ಬೆಂಗಳೂರು : ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಈ ಹಿಂದಿನ ಬಜೆಟ್‌ನಲ್ಲಿ ಘೋಷಿಸಿದಂತೆ 'ರೈತ ಶಕ್ತಿ ಯೋಜನೆ'ಗೆ ಈ ತಿಂಗಳಾಂತ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ‌ ನೀಡಲಿದ್ದಾರೆ. ಕೃಷಿ ಯಾಂತ್ರೀಕರಣವು ಡೀಸೆಲ್‌ ಇಂಧನದ ಮೇಲೆ ಬಹುತೇಕ‌ ಅವಲಂಬಿತವಾಗಿದೆ. ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆಯನ್ನು ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022-23ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆಯನ್ನು ಘೋಷಿಸಲಾಗಿತ್ತು.

ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನದ ವೆಚ್ಚದ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯದಲ್ಲಿಯೇ ಮೊದಲ ಬಾರಿಗೆ ರೈತ ಶಕ್ತಿ ಯೋಜನೆ ಇದೇ ತಿಂಗಳಾಂತ್ಯಕ್ಕೆ ಜಾರಿಯಾಗಲಿದೆ. ಪ್ರತಿ ಎಕರೆಗೆ 250 ರೂ.ಗಳಂತೆ ಗರಿಷ್ಠ ಐದು ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್​ಗೆ ಸಹಾಯಧನವನ್ನು ಈ ಯೋಜನೆ ನೀಡಲಿದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ಸುಮಾರು 45 ಲಕ್ಷಕ್ಕೂ ಹೆಚ್ಚಿನ ರೈತಾಪಿ ಕುಟುಂಬಗಳಿಗೆ ಡಿಬಿಟಿ ಮೂಲಕ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಬಿಡುಗಡೆ ಮಾಡಲಿದ್ದಾರೆ. ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ (FRUITS) ಫ್ರೂಟ್​ ಫೋರ್ಟಲ್‌‌ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ.

ಫ್ರೂಟ್ ಪೋರ್ಟಲ್‌ ಮೂಲಕ ನೋಂದಣೆ: ಫ್ರೂಟ್ ಪೋರ್ಟಲ್‌ನಲ್ಲಿ ನೋಂದಣಿಗೊಂಡ ರಾಜ್ಯದ ಎಲ್ಲಾ ರೈತರಿಗೆ, ರೈತ ಶಕ್ತಿ ಯೋಜನೆಯನ್ನು ಸಹ ಕಿಸಾನ್ ತಂತ್ರಾಂಶ ಬಳಸಿಕೊಂಡು ನೇರ ವರ್ಗಾವಣೆ (DBT) ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ. ನಗದು ಯೋಜನೆಯ ಫ್ರೂಟ್ ಪೋರ್ಟಲ್​ನಲ್ಲಿ ನೋಂದಣಿಗೊಂಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ. ಯೋಜನೆಯು ಅರ್ಹತಾಧಾರಿತ ಯೋಜನೆಯಾಗಿದ್ದು ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ. ದಾಖಲೆಗಳ ಪರಿಶೀಲನೆಯನ್ನು ಸರ್ಕಾರದ ಫ್ರೂಟ್ ಪೋರ್ಟಲ್​ನಲ್ಲಿ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಮಾಡಲಾಗುತ್ತದೆ.

ಫ್ರೂಟ್ ಪೋರ್ಟಲ್‌ನಲ್ಲಿ ನಮೂದಿಸಲಾದ ಹಿಡುವಳಿಯ ವಿಸ್ತೀರ್ಣದ ಆಧಾರದಲ್ಲಿ ರೈತರಿಗೆ ಡೀಸೆಲ್‌ ಸಹಾಯಧನವನ್ನು ನೇರ ನಗದು ವರ್ಗಾವಣೆ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಫ್ರೂಟ್ ತಂತ್ರಾಂಶದಲ್ಲಿ ನೋಂದಾವಣೆಗೊಂಡ ರೈತರು ಹೊಂದಿರುವ ಭೂ ಹಿಡುವಳಿಯ ಆಧಾರದಲ್ಲಿ ಪ್ರತಿಯೊಬ್ಬ ರೈತನಿಗೆ ಪ್ರತಿ ಎಕರೆಗೆ 250 ರೂ. ರಂತೆ ಗರಿಷ್ಠ ಐದು ಎಕರೆಗೆ 1250 ರೂ. ರವರೆಗೆ ಡೀಸೆಲ್ ಸಹಾಯಧನ ನೀಡಲಾಗುತ್ತದೆ. ಅರ್ಹ ರೈತರಿಗೆ ಡೀಸೆಲ್ ಸಹಾಯಧನದ ಮೊತ್ತವನ್ನು ಸೀಡೆಡ್ ಬ್ಯಾಂಕ್/ಪೋಸ್ಟ್ ಆಫೀಸ್ ಖಾತೆಗೆ ವರ್ಷಕ್ಕೊಮ್ಮೆ ವರ್ಗಾಯಿಸಲಾಗುತ್ತದೆ. ಈ ಹಿಂದೆ ಕೃಷಿ ಮಂತ್ರಿ ಬಿ.ಸಿ.ಪಾಟೀಲ್​ ಅವರು ಕೃಷಿ ಕ್ಷೇತ್ರದಲ್ಲಿ ​ರೈತರಿಗೆ ಯಾವುದೇ ತರಹದ ಹೊರೆಯಾಗದಂತೆ 'ರೈತ ಶಕ್ತಿ ಯೋಜನೆೆ'ಗೆ ಚಾಲನೆ ಕೊಟ್ಟಿದ್ದರು. 2022-23 ಸೆಪ್ಟೆಂಬರ್​ನಲ್ಲಿ ಆಯವ್ಯಯದಲ್ಲಿ ಯೋಜನೆಯನ್ನು ಘೋಷಿಸಲಾಗಿತ್ತು.

ಇದನ್ನೂ ಓದಿ: ಭೂಮಿಯಂತಿರುವ ಎಕ್ಸೋಪ್ಲಾನೆಟ್​ ಕಂಡು ಹಿಡಿದ ನಾಸಾದ ವೆಬ್ ದೂರದರ್ಶಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.