ETV Bharat / state

ರಾಜಾಜಿನಗರ ಆಟದ ಮೈದಾನದ ಅಭಿವೃದ್ಧಿ ಕಾಮಗಾರಿ ಸ್ಥಗಿತ: ಸರ್ಕಾರಕ್ಕೆ ನೋಟಿಸ್​ ​

ರಾಜಾಜಿನಗರ ಆಟದ ಮೈದಾನದಲ್ಲಿ ಕೈಗೊಂಡಿದ್ದ ಅಭಿವೃದ್ಧಿ ಕಾಮಗಾರಿಗಳನ್ನು ಸ್ಥಗಿತಗೊಳಿಸಿದ ಸಂಬಂಧ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

High Court Notice to State Govt and BBMP
ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್
author img

By

Published : Dec 8, 2022, 10:03 PM IST

ಬೆಂಗಳೂರು: ರಾಜಾಜಿನಗರ ರಾಮಂದಿರ ಆಟದ ಮೈದಾನದಲ್ಲಿ ಕೈಗೊಂಡಿದ್ದ ಅಭಿವೃದ್ಧಿ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ವಿಚಾರದ ಕುರಿತು ಸಲ್ಲಿಸಿರುವ ಅರ್ಜಿಗೆ ಹೈಕೋರ್ಟ್​ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿದೆ. ರಾಮಮಂದಿರ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಆರ್.ಹೇಮಂತ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ವಿಚಾರಣೆಯ ವೇಳೆ ಪ್ರತಿವಾದಿಗಳಾದ ರಾಜ್ಯ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಬಿಬಿಎಂಪಿ ಮುಖ್ಯ ಆಯುಕ್ತರು, ಜಂಟಿ ಆಯುಕ್ತರು, ಪಾಲಿಕೆಯ ರಾಜಾಜಿನಗರ ವಲಯದ ಕಾರ್ಯಕಾರಿ ಎಂಜಿನಿಯರ್ ಮತ್ತು ಸಹಾಯಕ ಕಾರ್ಯಕಾರಿ ಎಂಜಿನಿಯರ್‌ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. ನಗರೋತ್ಥಾನ ಯೋಜನೆಯಡಿ 2022ರ ಏ 10ರಂದು ಆಟದ ಮೈದಾನದಲ್ಲಿ ನವೀಕರಣ ಕಾಮಗಾರಿ ಕೈಗೊಳ್ಳಲಾಗಿತ್ತು. ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಹೇಳಿದ್ದರು. ಆದರೆ ಎರಡು ತಿಂಗಳ ಅಧಿಕ ಸಮಯ ಕಳೆದರು ಕಾಮಗಾರಿ ನಡೆಸಿಲ್ಲ ಇದರಿಂದ ಮೈದಾನ ಸಂಪೂರ್ಣವಾಗಿ ಅವ್ಯವಸ್ಥೆಯಿಂದ ಕೂಡಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಇದ್ದರಿಂದ ಸ್ಥಳೀಯ ನಿವಾಸಿಗಳು ಮತ್ತು ಕ್ರೀಡಾಪಟುಗಳಿಗೆ ತುಂಬಾ ತೊಂದರೆ ಉಂಟಾಗಿದೆ ಎಂದು ಅರ್ಜಿದಾರರು ದೂರಿದ್ದರು. ಕಾಮಗಾರಿ ಪೂರ್ಣಗೊಳಿಸಲು ಕೋರಿ 2022ರ ಸೆ.22 ಮತ್ತು 23ರಂದು ನೀಡಿರುವ ಮನವಿ ಪತ್ರವನ್ನು ಸರ್ಕಾರ ಹಾಗೂ ಬಿಬಿಎಂಪಿ ಪರಿಗಣಿಸಿಲ್ಲ. ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ನಾಗರಿಕರ ಬಳಕೆಗೆ ಆಟದ ಮೈದಾನವನ್ನು ಮುಕ್ತಗೊಳಿಸುವಂತೆ ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಇದನ್ನೂ ಓದಿ :ಬೆಂಗಳೂರು : ರಾಮಮಂದಿರ‌ ಆಟದ ಮೈದಾನದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.