ETV Bharat / state

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಘಟಿಕೋತ್ಸವ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗಿ

ಫೆ. 7ರಂದು ನಡೆಯಲಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 23ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ರಾಷ್ಟಪತಿ ರಾಮನಾಥ್ ಕೋವಿಂದ್
ರಾಷ್ಟಪತಿ ರಾಮನಾಥ್ ಕೋವಿಂದ್
author img

By

Published : Feb 5, 2021, 6:02 PM IST

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 23ನೇ ವಾರ್ಷಿಕ ಘಟಿಕೋತ್ಸವ ಇದೇ ಭಾನುವಾರ 7ರಂದು ನಡೆಯಲಿದೆ. ಇದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಘಟಿಕೋತ್ಸವ

ವಿವಿಯ ವಿವಿಧ ವಿಷಯಗಳಲ್ಲಿ 33,629 ಅಭ್ಯರ್ಥಿಗಳು ಪದವಿ ಪಡೆಯಲು ಅರ್ಹರಾಗಿರುತ್ತಾರೆ. ಇವರ ಪೈಕಿ 30 ಪಿಹೆಚ್​ಡಿ, 115 ಸೂಪರ್ ಸ್ಪೆಷಾಲಿಟಿ, 5,824 ಸ್ನಾತಕೋತ್ತರ ಪದವಿ, 351 ಸ್ನಾತಕೋತ್ತರ ಡಿಪ್ಲೋಮಾ ಪದವಿ, 79 ಫೆಲೋಷಿಪ್ ಕೋರ್ಸ್, 9 ಸರ್ಟಿಫಿಕೇಟ್ ಕೋರ್ಸ್ ಹಾಗೂ 27,221 ಸ್ನಾತಕ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳ ಒಟ್ಟು ವಿದ್ಯಾರ್ಥಿಗಳ ಒಟ್ಟಾರೆ ಫಲಿತಾಂಶ ಶೇ. 82ರಷ್ಟು ಆಗಿರುತ್ತದೆ.

ಓದಿ:ಬೆಂಗಳೂರಿಗೆ ರಾಷ್ಟ್ರಪತಿ ಆಗಮನ: ರಾಜ್ಯಪಾಲ, ಸಿಎಂರಿಂದ ಸ್ವಾಗತ

ಇನ್ನು 23ನೇ ಘಟಿಕೋತ್ಸವ ಸಮಾರಂಭದಲ್ಲಿ ಡಾ. ಅಲಂಗಾರ್ ಸತ್ಯರಂಜನ್ ದಾಸ್ ಹೆಗ್ಡೆ ಅವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಡಾಕ್ಟರೇಟ್​ ಪದವಿ ಪ್ರದಾನ ಮಾಡಲಾಗುತ್ತಿದೆ. 122 ಚಿನ್ನದ ಪದಕಗಳು, 8 ನಗದು ಬಹುಮಾನಗಳಿಗೆ ಒಟ್ಟು 111 ವಿದ್ಯಾರ್ಥಿಗಳು ಭಾಜನರಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಗುವ ಚಿನ್ನದ ಪದಕವು 22 ಕ್ಯಾರೆಟ್ ಬಂಗಾರವುಳ್ಳ 5 ಗ್ರಾಂ ತೂಕದ ಪದಕವಾಗಿರುತ್ತದೆ. ಪ್ರಥಮ ರ‍್ಯಾಂಕ್​ ಗಳಿಸಿದ ವಿದ್ಯಾರ್ಥಿಗಳಿಗೆ ನೀಡುವ ಚಿನ್ನದ ಪದಕಗಳಿಗೆ ವಿಶ್ವವಿದ್ಯಾಲಯದ ಸಂಪನ್ಮೂಲದಿಂದ ಹಾಗೂ ದಾನಿಗಳು ದೇಣಿಗೆಯಾಗಿ ನೀಡಿರುವ ಹಣದ ನಿಧಿಯಿಂದ ವೆಚ್ಚವನ್ನು ಭರಿಸಲಾಗುವುದು.

ಕೋವಿಡ್-19ರ ಪರಿಸ್ಥಿತಿಯ ಕಾರಣ ಘಟಿಕೋತ್ಸವ ಸಮಾರಂಭ ಜರುಗುವ ಬೆಂಗಳೂರಿನ ನಿಮ್ಹಾನ್ಸ್ ಸಭಾಂಗಣದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಚಿನ್ನದ ಪದಕ/ಬಹುಮಾನ ವಿಜೇತರು ಹಾಗೂ ಪಿಹೆಚ್​ಡಿ ಪದವಿ ಸ್ವೀಕರಿಸುವವರನ್ನು ಮಾತ್ರ ಆಹ್ವಾನಿಸಲಾಗಿದೆ. ಘಟಿಕೋತ್ಸವ ಸಮಾರಂಭವನ್ನ ಆನ್​ಲೈನ್ ಮೂಲಕ ವೀಕ್ಷಣೆ ಮಾಡಬಹುದಾಗಿದೆ. Https://youtu.be/UPXIzd5W9OI ಮೂಲಕ ವೀಕ್ಷಿಸಬಹುದು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.