ETV Bharat / state

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ರಜನೀಶ್ ಗೋಯಲ್ ನೇಮಕ

Rajneesh Goel is new CS of Karnataka: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

rajneesh goel
ರಜನೀಶ್ ಗೋಯಲ್
author img

By ETV Bharat Karnataka Team

Published : Nov 22, 2023, 6:52 AM IST

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ(ಸಿಎಸ್‌) ಹಿರಿಯ ಐಎಎಸ್‌ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಸದ್ಯಕ್ಕೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಗೋಯಲ್, ಡಿಸೆಂಬರ್ 1ರಂದು ಅಧಿಕಾರ ಸ್ವೀಕರಿಸುವರು.

ಪ್ರಸ್ತುತ ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ಅವರ ಅಧಿಕಾರಾವಧಿ ನವೆಂಬರ್ 30ರಂದು ಕೊನೆಗೊಳ್ಳಲಿದೆ. ಹಿರಿತನದ ಆಧಾರದಡಿ ರಜನೀಶ್‌ ಗೋಯಲ್‌ ಅವರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ. ಗೋಯಲ್‌ 1986ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದು, 2024ರ ಜುಲೈನಲ್ಲಿ ನಿವೃತ್ತರಾಗಲಿದ್ದಾರೆ. ಹಾಲಿ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಇವರು ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ಕೆಎಸ್ಆರ್​​ಟಿಸಿ ಬಸ್​ ಮೇಲೆ ಕಲ್ಲು ತೂರಾಟ : ಮಹಾರಾಷ್ಟ್ರ ಗೃಹ ಕಾರ್ಯದರ್ಶಿಗೆ ಎಸಿಎಸ್ ರಜನೀಶ್ ಗೋಯೆಲ್ ಕರೆ

ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಿರಿಯ ಐಎಎಸ್‌ ಅಧಿಕಾರಿಗಳಾದ ಅಜಯ್‌ ಸೇಠ್‌, ರಾಕೇಶ್‌ ಸಿಂಗ್‌ ಮತ್ತು ವಿ.ಮಂಜುಳಾ ಅವರ ಹೆಸರುಗಳು ಕೇಳಿ ಬಂದಿದ್ದವು. ಆದರೆ, ವಿ.ಮಂಜುಳಾ ಕಿರಿಯ ಐಎಎಸ್ ಅಧಿಕಾರಿಯಾಗಿದ್ದು, ಹುದ್ದೆಗೆ ಪರಿಗಣಿಸಿಲ್ಲ. ಅದೇ ರೀತಿ ರಾಕೇಶ್‌ ಸಿಂಗ್ 2024ರ ಮೇ ತಿಂಗಳಲ್ಲಿ ನಿವೃತ್ತರಾಗಲಿದ್ದಾರೆ. ಮತ್ತೊಬ್ಬ ಹಿರಿಯ ಅಧಿಕಾರಿ ಅಜಯ್‌ ಸೇಠ್‌ ಕೇಂದ್ರದ ಆರ್ಥಿಕ ವ್ಯವಹಾರಗಳ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವರೂ ಕೂಡ ಮುಖ್ಯ ಕಾರ್ಯದರ್ಶಿಯಾಗಬಹುದು ಎಂದು ಹೇಳಲಾಗಿತ್ತು. ಆದರೆ ಹಿರಿತನ ಪರಿಗಣಿಸಿ ರಜನೀಶ್‌ ಗೋಯಲ್‌ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಗಳನ್ನಾಗಿ ಸರ್ಕಾರ ನೇಮಕ ಮಾಡಿದೆ.

37 ವರ್ಷಗಳ ತಮ್ಮ ವೃತ್ತಿ ಜೀವನದಲ್ಲಿ ರಜನೀಶ್ ಗೋಯಲ್ ಅವರು ಬಿಬಿಎಂಪಿ ಆಯುಕ್ತ ಸೇರಿದಂತೆ ಹಲವು ಹುದ್ದೆಗಳನ್ನು ಅಲಂಕರಿಸಿದ್ದಾರೆ. ಉನ್ನತ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಕ್ರೀಡಾ ಇಲಾಖೆಗಳಲ್ಲಿ ಕೆಲಸ ಮಾಡಿರುವ ಅನುಭವಿ.

ಇದನ್ನೂ ಓದಿ: ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಪಿ. ಬಿ. ಮಹಿಷಿ ನಿಧನ, ಸಿಎಂ ಸಂತಾಪ

ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸಿದ್ದ 4ನೇ ಮಹಿಳೆಯಾಗಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006ರಲ್ಲಿ ಮಾಲತಿ ದಾಸ್ ಹಾಗೂ 2017ರಲ್ಲಿ ಕೆ.ರತ್ನಪ್ರಭಾ ನಿರ್ವಹಿಸಿದ್ದರು.

ಇದನ್ನೂ ಓದಿ: ದೆಹಲಿ ಸಿಎಂ ಕೇಜ್ರಿವಾಲ್ ಮುಖ್ಯ ಕಾರ್ಯದರ್ಶಿ ಪ್ರಕರಣ : ವಿಜಿಲೆನ್ಸ್ ಸಚಿವರಿಂದ ವರದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.