ETV Bharat / state

ರಾಜ್ಯಸಭೆ ಚುನಾವಣೆ : ಮುಂದುವರಿದ ಕಾಂಗ್ರೆಸ್ - ಜೆಡಿಎಸ್‍ ಮೈತ್ರಿ ಗೊಂದಲ - Rajya Sabha polls

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿ ಗೊಂದಲ ಮುಂದುವರೆದಿದೆ. ಉಭಯ ಪಕ್ಷಗಳ ನಾಯಕರ ನಡುವೆ ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲುವನ್ನು ತಡೆಯಲು ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಮಾತುಕತೆ ನಡೆದಿದೆಯಾದರೂ ನಿರೀಕ್ಷಿತ ಫಲ ಸಿಕ್ಕಿಲ್ಲ.

rajya-sabha-election-alliance-confusion-continued-between-congress-jds
ರಾಜ್ಯಸಭೆ ಚುನಾವಣೆ : ಮುಂದುವರೆದ ಕಾಂಗ್ರೆಸ್ - ಜೆಡಿಎಸ್‍ ಮೈತ್ರಿ ಗೊಂದಲ
author img

By

Published : Jun 2, 2022, 8:13 PM IST

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿ ಗೊಂದಲ ಮುಂದುವರೆದಿದೆ. ಈಗಾಗಲೇ ಎರಡೂ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಇಲ್ಲಿಯವರೆಗೆ ನಾಮಪತ್ರ ವಾಪಸ್‌ ಪಡೆಯುವ ಯಾವುದೇ ಸುಳಿವು ನೀಡಿಲ್ಲ. ನಾಮಪತ್ರ ವಾಪಸ್ ಪಡೆಯಲು ನಾಳೆ ಕೊನೆ ದಿನವಾಗಿದೆ.

ಉಭಯ ಪಕ್ಷಗಳ ನಾಯಕರ ನಡುವೆ ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲುವನ್ನು ತಡೆಯಲು ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಮಾತುಕತೆ ನಡೆದಿದೆಯಾದರೂ ನಿರೀಕ್ಷಿತ ಫಲ ಇಲ್ಲಿಯವರೆಗೂ ಸಿಕ್ಕಿಲ್ಲ. ಕಾಂಗ್ರೆಸ್ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ಅವರನ್ನು ಕಣಕ್ಕಿಳಿಸಿದ್ದು, ಜೆಡಿಎಸ್ ನಮ್ಮ ಅಭ್ಯರ್ಥಿಯನ್ನೇ ಬೆಂಬಲಿಸಬೇಕು. ಆ ಮೂಲಕ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಚುನಾಯಿಸಿದಂತಾಗುತ್ತದೆ ಎಂಬ ವಾದವನ್ನು ಮುಂದಿಟ್ಟಿದೆ. ಆದರೆ, ಜೆಡಿಎಸ್ ಜಾತ್ಯತೀತ ಮತಗಳು ವಿಭಜನೆಯಾಗಿ ಆಡಳಿತಾರೂಢ ಬಿಜೆಪಿಗೆ ಅನುಕೂಲವಾಗುವುದನ್ನು ತಪ್ಪಿಸಲು ಜೆಡಿಎಸ್ ಅಭ್ಯರ್ಥಿ ಕುಪ್ಪೇಂದ್ರ ರೆಡ್ಡಿ ಅವರನ್ನು ಬೆಂಬಲಿಸಬೇಕು. ಅದಕ್ಕಾಗಿ ಕಾಂಗ್ರೆಸ್‍ನ ಎರಡನೇ ಅಭ್ಯರ್ಥಿ ವಾಪಸ್ ಪಡೆಯಬೇಕು ಎಂಬ ಬೇಡಿಕೆ ಇಟ್ಟಿದೆ.

ಹೊಂದಾಣಿಕೆ ಅನಿವಾರ್ಯ: ಈ ಎರಡೂ ಪಕ್ಷಗಳ ಅಭ್ಯರ್ಥಿಗಳು ಗೆಲ್ಲಲು ಬೇಕಾದ ಮತಗಳು ಇಲ್ಲದಿರುವ ಹಿನ್ನೆಲೆಯಲ್ಲಿ ಪರಸ್ಪರ ಹೊಂದಾಣಿಕೆ ಅನಿವಾರ್ಯವಾಗಿದೆ. ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿಗೆ ದೊರೆಯುವ ಮತಗಳಿಗಿಂತ ಜೆಡಿಎಸ್ ಅಭ್ಯರ್ಥಿಗೆ ಹೆಚ್ಚು ಮತ ದೊರೆಯುವುದರಿಂದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆಯಬೇಕು ಎಂಬ ಮನವಿಯನ್ನು ಮಾಡಲಾಗಿದೆ.

ಸಿದ್ದರಾಮಯ್ಯ ಭೇಟಿ: ಜೆಡಿಎಸ್ ಅಭ್ಯರ್ಥಿ ಕುಪ್ಪೇಂದ್ರ ರೆಡ್ಡಿ ಅವರು, ಪರಿಷತ್​​ನ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಅವರನ್ನು ಕಳೆದ ಭಾನುವಾರ ಭೇಟಿ ಮಾಡಿ ಬೆಂಬಲ ಕೋರಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್‍ನ ಎರಡನೇ ಅಭ್ಯರ್ಥಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ವಿಧಾನಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್ ಹಾಗೂ ಟಿ.ಎ. ಶರವಣ, ಮಂಗಳವಾರ(ನಿನ್ನೆ) ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಸಹಕಾರ ನೀಡುವಂತೆ ಕೋರಿದ್ದರು.

ಆದರೆ, ಸಿದ್ದರಾಮಯ್ಯ ಅವರು ಯಾವುದೇ ನಿರ್ದಿಷ್ಟ ಭರವಸೆ ನೀಡಿಲ್ಲ. ಆದರೂ, ಪಟ್ಟುಬಿಡದ ಜೆಡಿಎಸ್‍ ನಾಯಕರು, ಸಿದ್ದರಾಮಯ್ಯ ಅವರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಪಕ್ಷದ ಅಭ್ಯರ್ಥಿ ಕುಪ್ಪೇಂದ್ರ ರೆಡ್ಡಿಯವರ ಜೊತೆಗೆ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ಅದು ಎಷ್ಟರಮಟ್ಟಿಗೆ ಯಶಸ್ಸು ಕಂಡಿದೆ ಎಂಬುದು ನಿಗೂಢವಾಗಿದೆ.

ಸಿದ್ದು-ಹೆಚ್​ಡಿಕೆ ಟ್ವೀಟ್​ ವಾರ್​: ಒಂದೆಡೆ ರೇವಣ್ಣ ಅವರು ಸಿದ್ದರಾಮಯ್ಯ ಮನವೊಲಿಕೆಗೆ ಮುಂದಾದರೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಾತ್ರ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಟ್ವೀಟ್ ವಾರ್ ಮುಂದುವರಿಸಿದ್ದಾರೆ. ಸಿಂಗಾಪುರಕ್ಕೆ ತೆರಳಿರುವ ಕುಮಾರಸ್ವಾಮಿ ಅವರು ಇಂದು ರಾತ್ರಿ ಅಥವಾ ನಾಳೆ ವಾಪಸ್ ಆಗಲಿದ್ದಾರೆ. ಆದರೆ, ರಾಜ್ಯಸಭಾ ಚುನಾವಣೆ ಬಗ್ಗೆ ಕುಮಾರಸ್ವಾಮಿ ಅವರು ಅಷ್ಟಾಗಿ ಗಮನಹರಿಸಿಲ್ಲ ಎನ್ನಲಾಗಿದೆ.

ಕೊನೆಗಳಿಗೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡಲಿದ್ದು, ನಮಗೆ ಅನುಕೂಲವಾಗಲಿದೆ ಎಂಬ ಆಶಾಭಾವನೆಯಲ್ಲಿ ಜೆಡಿಎಸ್ ಇದೆ. ಇದರ ನಡುವೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಾಂಗ್ರೆಸ್ ವರಿಷ್ಠರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸುವ ಸಾಧ್ಯತೆ ಇದ್ದು, ಒಂದು ವೇಳೆ ಅದು ಫಲಪ್ರದವಾದರೆ ಪ್ರತಿಪಕ್ಷಗಳ ಮೈತ್ರಿ ಅಭ್ಯರ್ಥಿ ರಾಜ್ಯಸಭೆ ಪ್ರವೇಶಿಸುವ ಹಾದಿ ಸುಗಮವಾಗಲಿದೆ.

ಇಲ್ಲದಿದ್ದರೆ ಇಬ್ಬರೂ ಅಭ್ಯರ್ಥಿಗಳು ಪರಾಜಿತಗೊಂಡು ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲುವಿಗೆ ಸಹಕಾರ ನೀಡಿದಂತಾಗಲಿದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ನಡೆಯುತ್ತಿವೆ.

ಇದನ್ನೂ ಓದಿ: ನವ ಸಂಕಲ್ಪ ಶಿಬಿರಕ್ಕೆ ಕೆಲ ಅತೃಪ್ತರ ಗೈರು.. ರಾಜ್ಯ ನಾಯಕರ ಸಂಘಟನೆ ಯತ್ನಕ್ಕೆ ಆಗುತ್ತಾ ಹಿನ್ನಡೆ?!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.