ETV Bharat / state

ಬಿಜೆಪಿ ಕಚೇರಿಗೆ ನಿರ್ಮಲಾ ಸೀತಾರಾಮನ್ ಭೇಟಿ: ರಾಜ್ಯಸಭೆ ಚುನಾವಣೆಗೆ ನಾಳೆ ನಾಮಪತ್ರ ಸಲ್ಲಿಕೆ..! - rajya sabha election

ರಾಜ್ಯಸಭೆಗೆ ಬಿಜೆಪಿಯಿಂದ ಎರಡನೇ ಬಾರಿ ಟಿಕೆಟ್ ಪಡೆದುಕೊಂಡ ನಿರ್ಮಲಾ ಸೀತಾರಾಮನ್ ಅಗತ್ಯ ದಾಖಲೆಗಳೊಂದಿಗೆ ರಾಜ್ಯಕ್ಕೆ ಆಗಮಿಸಿದ್ದು,ನಾಳೆ ಬೆಳಗ್ಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

rajya-sabha-election-central-minister-nirmala-seetharaman-submits-nomination-tommorrow
ಬಿಜೆಪಿ ಕಚೇರಿಗೆ ನಿರ್ಮಲಾ ಸೀತಾರಾಮನ್ ಭೇಟಿ: ರಾಜ್ಯಸಭೆ ಚುನಾವಣೆಗೆ ನಾಳೆ ನಾಮಪತ್ರ ಸಲ್ಲಿಕೆ..!
author img

By

Published : May 30, 2022, 6:20 PM IST

ಬೆಂಗಳೂರು: ಕರ್ನಾಟಕದಿಂದ ಎರಡನೇ ಬಾರಿಗೆ ರಾಜ್ಯಸಭೆಗೆ ಆಯ್ಕೆ ಆಗುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಇಂದು ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಅಭಿನಂದಿಸಲಾಯಿತು.

ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಹೆಸರು ಪ್ರಕಟಗೊಂಡ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಸಚಿವೆ ಆಗಮಿಸಿದರು. ಇವರಿಗೆ ವಿಧಾನಪರಿಷತ್ ಸದಸ್ಯೆ ತೇಜಸ್ವಿನಿಗೌಡ ಹಾರ ಹಾಕಿ ಶಾಲು ಹೊದಿಸಿ ಗೌರವಿಸಿದರು. ಎರಡನೇ ಬಾರಿಗೆ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಸತೀಶ್, ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ರಾಜ್ಯ ಮುಖ್ಯ ವಕ್ತಾರ ಎಂಜಿ ಮಹೇಶ್, ಶಾಸಕ ರಾಜ್‍ಕುಮಾರ್ ಪಾಟೀಲ ತೇಲ್ಕೂರ ಹಾಗೂ ಇತರರು ಕೇಂದ್ರ ಸಚಿವರಿಗೆ ಶುಭ ಕೋರಿದರು.

ನಾಳೆ ನಾಮಪತ್ರ ಸಲ್ಲಿಕೆ : ರಾಜ್ಯಸಭೆಗೆ ಬಿಜೆಪಿಯಿಂದ ಎರಡನೇ ಬಾರಿ ಟಿಕೆಟ್ ಪಡೆದುಕೊಂಡ ನಿರ್ಮಲಾ ಸೀತಾರಾಮನ್ ಅಗತ್ಯ ದಾಖಲೆಗಳೊಂದಿಗೆ ರಾಜ್ಯಕ್ಕೆ ಆಗಮಿಸಿದ್ದು, ಬಿಜೆಪಿ ಕಚೇರಿಯಲ್ಲಿ ದಾಖಲೆಗಳ ವಿವರ ಪಡೆದುಕೊಂಡರು. ಕಚೇರಿಯಲ್ಲೇ ದಾಖಲೆಗಳ ಪರಿಶೀಲನೆ ನಡೆಸಲಾಯಿತು. ಎಲ್ಲ ದಾಖಲೆಗಳನ್ನು ಸಿದ್ದಪಡಿಸಿಕೊಂಡಿರುವ ನಿರ್ಮಲಾ ಸೀತಾರಾಮನ್ ನಾಳೆ ಬೆಳಗ್ಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಜೊತೆಗೆ ನಟ ಜಗ್ಗೇಶ್ ಕೂಡ ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಓದಿ : ಗಂಗಾವತಿ ಮೂಲದ ದಂತೆ ವೈದ್ಯೆಗೆ ಯುಪಿಎಸ್​​​ಸಿ ಯಲ್ಲಿ 191ನೇ ರ್‍ಯಾಂಕ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.