ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಸಲ್ಲಿಸಲಾಗಿದ್ದ ಎಲ್ಲ ಆರು ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದೆ. ಬಿಜೆಪಿಯ ಮೂವರು, ಕಾಂಗ್ರೆಸ್ ಪಕ್ಷದ ಇಬ್ಬರು ಹಾಗೂ ಜೆಡಿಎಸ್ನ ಓರ್ವ ಅಭ್ಯರ್ಥಿ ನಾಮಪತ್ರಗಳೂ ಒಳಗೊಂಡಂತೆ ಎಲ್ಲ ಆರು ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಹಾಗೂ ಅಂಗೀಕೃತವಾಗಿವೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.
![rajya-sabha-elections-all-nominations-are-valid](https://etvbharatimages.akamaized.net/etvbharat/prod-images/kn-bng-03-nominations-inorder-script-7201951_01062022134127_0106f_1654071087_185.jpg)
ಈ ಸಂಬಂಧ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ. ರಾಜ್ಯಸಭೆ ಚುನಾವಣಾ ಅಭ್ಯರ್ಥಿಗಳಾಗಿ ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಹಾಗೂ ಲೆಹರ್ ಸಿಂಗ್, ಕಾಂಗ್ರೆಸ್ ಪಕ್ಷದಿಂದ ಜಯರಾಂ ರಮೇಶ್, ಮನ್ಸೂರ್ ಖಾನ್ ಮತ್ತು ಜೆಡಿಎಸ್ನಿಂದ ಕುಪ್ಪೇಂದ್ರ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರಗಳ ಪರಿಶೀಲನೆ ನಡೆದಿತ್ತು. ಜೂನ್ 10ಕ್ಕೆ ರಾಜ್ಯಸಭೆ ಚುನಾವಣೆ ನಡೆಯಲಿದೆ.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ತ್ಯಜಿಸುವವರಿಗಾಗಿ ಹೊಸ ಅಭಿಯಾನ ಘೋಷಿಸುವಿರಾ: ಬಿಜೆಪಿ ವ್ಯಂಗ್ಯ