ಬೆಂಗಳೂರು: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಸಭಾ ಚುನಾವಣಾ ಉಸ್ತುವಾರಿ ಕಿಶನ್ ರೆಡ್ಡಿ, ಸಚಿವರು, ಶಾಸಕರು ಭಾಗಿಯಾಗಿದ್ದಾರೆ.
ಬಿಜೆಪಿ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಗಳಾದ ಜಗ್ಗೇಶ್ ಮತ್ತು ಲೆಹರ್ ಸಿಂಗ್ ಹಾಜರಾಗಿದ್ದು, ವಿಧಾನ ಪರಿಷತ್ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಹಲವು ಸಚಿವರು ಮತ್ತು ಶಾಸಕರ ಅನುಪಸ್ಥಿತಿ ಇದೆ. ಸಭೆಯಲ್ಲಿ ಮಾಜಿ ಸಿಎಂಗಳೂ ಭಾಗಿಯಾಗಿದ್ದಾರೆ.
ಜೂನ್ 10 ರಾಜ್ಯಸಭಾ ಚುನಾವಣೆ ಇರುವ ಹಿನ್ನೆಲೆ ಇಂದು ಸಂಜೆ 6 ಗಂಟೆಗೆ ಖಾಸಗಿ ಹೋಟೆಲ್ನಲ್ಲಿ ಆರಂಭವಾಗಬೇಕಿದ್ದ, ಬಿಜೆಪಿ ಶಾಸಕಾಂಗ ಸಭೆ ನಿಗದಿತ ಸಮಯಕ್ಕಿಂತ ಎರಡು ಗಂಟೆ ತಡವಾಗಿ ಆರಂಭವಾಗಿದೆ.
ಸಭೆಯಲ್ಲಿ ಯಾವ ಅಭ್ಯರ್ಥಿಗೆ ಯಾವ ಶಾಸಕರು ಮತ ಚಲಾಯಿಸಬೇಕು ಎಂದು ಮತಗಳನ್ನು ಹಂಚಿಕೆ ಮಾಡಲಾಗುತ್ತದೆ. ನಂತರ ಶಾಸಕರಿಗೆ ಕಡ್ಡಾಯವಾಗಿ ಪಕ್ಷ ಸೂಚಿಸುವ ಅಭ್ಯರ್ಥಿಗೆ ಮತದಾನ ಮಾಡುವಂತೆ ವಿಪ್ ಜಾರಿಗೊಳಿಸಲಾಗುತ್ತದೆ.
ಇದನ್ನೂ ಓದಿ:ಕಾಂಗ್ರೆಸ್ನಲ್ಲಿ 90 ವರ್ಷ ವಯಸ್ಸಾದ್ರೂ ಚುನಾವಣೆಗೆ ನಿಲ್ಲಿಸ್ತಾರೆ: ಸಚಿವ ಕತ್ತಿ ವ್ಯಂಗ್ಯ