ಬೆಂಗಳೂರು: ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಕೊಡುಗೆ ನೀಡಿದ ಸಾಧಕರಿಗೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು.
65 ಸಾಧಕರಿಗೆ ಪ್ರಶಸ್ತಿ ನೀಡಲಾಗಿದ್ದು, ಸುಗಮ ಸಂಗೀತ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ ಗಿರಿಜಾ ನಾರಾಯಣ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸರ್ಕಾರ ಇವರ ಸಾಧನೆಯನ್ನ ಪರಿಗಣಿಸಿ ಒಂದು ಲಕ್ಷ ರೂ. ಮೊತ್ತದ ಪ್ರಶಸ್ತಿ ನೀಡಿ ಗೌರವಿಸಿತು. ಆದ್ರೆ ಗಿರಿಜಾ ನಾರಾಯಣ್ ಒಂದು ಲಕ್ಷ ರೂ. ಮೊತ್ತದ ಪ್ರಶಸ್ತಿಯನ್ನ ಕೊರೊನಾ ಸಂಕಷ್ಟದಲ್ಲಿ ಸಿಎಂ ಪರಿಹಾರ ನಿಧಿಗೆ ನೀಡಿ ಮಾನವೀಯತೆ ಮೆರೆದರು.
ಈ ವೇಳೆ ಮಾತನಾಡಿದ ಅವರು, ನಮ್ಮ ಕುಟುಂಬದ ಸಹಕಾರದಿಂದಾಗಿ ಸುಗಮ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಯ್ತು. ಸುಗಮ ಸಂಗೀತ ಕ್ಷೇತ್ರಕ್ಕೆ ಹೆಚ್ಚು ಜನ ಬರಬೇಕು ಎಂದು ಮನವಿ ಮಾಡಿದರು. ಕೊರೊನಾ ಸಂಕಷ್ಟದಲ್ಲಿ ಸಹಾಯವಾಗಲಿ ಎಂದು ಒಂದು ಲಕ್ಷ ರೂ. ಹಣವನ್ನು ಸಿಎಂ ಪರಿಹಾರ ನಿಧಿಗೆ ನೀಡಿದ್ದಾಗಿ ಹೇಳಿದರು.