ಬೆಂಗಳೂರು: ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಾಡಿನ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.
'ಮನುಷ್ಯನನ್ನು ಎಲ್ಲಾ ವಿಧವಾದ ದೌರ್ಬಲ್ಯಗಳಿಂದ ಮುಕ್ತಗೊಳಿಸಿ ದೇಹ ಮತ್ತು ಆತ್ಮವನ್ನು ಶುದ್ಧಿಗೊಳಿಸುವ ಪವಿತ್ರ ರಂಜಾನ್ ಹಬ್ಬ ಶುಭ ತರಲಿ ಎಂದು ಅವರು ಸಂದೇಶ ತಿಳಿಸಿದ್ದಾರೆ.
ರಂಜಾನ್ ಎಂದರೆ ಕೇವಲ ಉಪವಾಸ ಮಾತ್ರವಲ್ಲ. ಅರ್ಹರಿಗೆ, ಅಗತ್ಯವಿರುವವರಿಗೆ ದಾನ, ಧರ್ಮ ಮಾಡಿ ಆ ಮೂಲಕ ಭಗವಂತನನ್ನು ಸಂಪ್ರೀತಗೊಳಿಸುವುದಾಗಿದೆ. ಸದ್ಯ ಜಗತ್ತಿನಲ್ಲಿ ಮಾನವಕುಲಕ್ಕೆ ಎದುರಾಗಿರುವ ದೊಡ್ಡ ಸವಾಲನ್ನು ನಾವೆಲ್ಲರೂ ಒಟ್ಟಾಗಿ ಮೆಟ್ಟಿನಿಲ್ಲಬೇಕಿದೆ.
ಭಾರತ ಸರ್ವ ಧರ್ಮಗಳ ಭೂಮಿಯಾಗಿದ್ದು, ದೇಶದಲ್ಲಿ ಎಲ್ಲರೂ ಶಾಂತಿ, ಸೌಹಾರ್ದತೆಯಿಂದ ಬದುಕಲು ಈ ಹಬ್ಬ ವೇದಿಕೆಯಾಗಲಿ' ಎಂದು ಡಿ.ಕೆ. ಶಿವಕುಮಾರ್ ಅವರು ತಮ್ಮ ಶುಭಾಶಯ ಸಂದೇಶದಲ್ಲಿ ತಿಳಿಸಿದ್ದಾರೆ.