ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಕೋವಿಡ್ ರೋಗಿಗಳು ಸಾವನ್ನಪ್ಪಿದ ಹಿನ್ನೆಲೆ ತನಿಖೆಗೆ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮನವಿ ಮಾಡಿದ್ದಾರೆ.
ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಧೀರೇಂದ್ರ ಎಚ್ ವಘೇಲಾ ಅವರಿಗೆ ಪತ್ರ ಬರೆದಿರುವ ರಾಮಲಿಂಗಾರೆಡ್ಡಿ, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಕೋವಿಡ್ ರೋಗಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ನೋಟಿಸ್ ನೀಡುವಂತೆ ಮನವಿ ಮಾಡಿದ್ದಾರೆ.
ಚಾಮರಾಜನಗರ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ವಿಚಾರಣೆ ನಡೆಸುವಂತೆ ಸಲಹೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ತಮ್ಮ ಪತ್ರದಲ್ಲಿ ಸುದೀರ್ಘ ವಿವರಣೆ ನೀಡಿತು ಮಾನವ ಹಕ್ಕು ಆಯೋಗದ ಮಧ್ಯಪ್ರವೇಶದಿಂದ ಮಾತ್ರ ನ್ಯಾಯ ಸಿಗಲು ಸಾಧ್ಯ ಎಂದು ವಿವರಿಸಿದ್ದಾರೆ.