ಬೆಂಗಳೂರು: ಪಕ್ಷ ಸಂಘಟನೆ ವಿಚಾರದಲ್ಲಿ ತಾವು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಾಮೂಹಿಕ ನಾಯಕತ್ವದೊಂದಿಗೆ ಪಕ್ಷ ಸಂಘಟನೆಗೆ ಮುಂದಾಗಲಿದ್ದೇವೆ. ಸಾಮೂಹಿಕ ನಾಯಕತ್ವದೊಂದಿಗೆ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದೇನೆ. ಈ ಸಂದರ್ಭ ನಾನಾಡಿದ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
-
ಇಂದು ಮಾಧ್ಯಮ ಮಿತ್ರರ ಪ್ರಶ್ನೆಗೆ ಉತ್ತರಿಸುತ್ತ, ಬೆಂಗಳೂರಿನಲ್ಲಿ 3-4 ಕ್ಷೇತ್ರಗಳ ಶಾಸಕರು @INCKarnataka ಬಿಟ್ಟು ಹೋಗಿದ್ದಾರೆ ಮತ್ತು ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ 3 ಚುನಾವಣೆಗಳಿಂದಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಸಾಧ್ಯವಾಗುತ್ತಿಲ್ಲ.
— Ramalinga Reddy (@RLR_BTM) January 24, 2021 " class="align-text-top noRightClick twitterSection" data="
ಅಂತಹ ಕ್ಷೇತ್ರಗಳ ಬಗ್ಗೆ ಹೆಚ್ಚು ಗಮನಹರಿಸುತ್ತೇನೆ ಎಂದು ಹೇಳಿದ್ದೇನೆ.
">ಇಂದು ಮಾಧ್ಯಮ ಮಿತ್ರರ ಪ್ರಶ್ನೆಗೆ ಉತ್ತರಿಸುತ್ತ, ಬೆಂಗಳೂರಿನಲ್ಲಿ 3-4 ಕ್ಷೇತ್ರಗಳ ಶಾಸಕರು @INCKarnataka ಬಿಟ್ಟು ಹೋಗಿದ್ದಾರೆ ಮತ್ತು ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ 3 ಚುನಾವಣೆಗಳಿಂದಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಸಾಧ್ಯವಾಗುತ್ತಿಲ್ಲ.
— Ramalinga Reddy (@RLR_BTM) January 24, 2021
ಅಂತಹ ಕ್ಷೇತ್ರಗಳ ಬಗ್ಗೆ ಹೆಚ್ಚು ಗಮನಹರಿಸುತ್ತೇನೆ ಎಂದು ಹೇಳಿದ್ದೇನೆ.ಇಂದು ಮಾಧ್ಯಮ ಮಿತ್ರರ ಪ್ರಶ್ನೆಗೆ ಉತ್ತರಿಸುತ್ತ, ಬೆಂಗಳೂರಿನಲ್ಲಿ 3-4 ಕ್ಷೇತ್ರಗಳ ಶಾಸಕರು @INCKarnataka ಬಿಟ್ಟು ಹೋಗಿದ್ದಾರೆ ಮತ್ತು ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ 3 ಚುನಾವಣೆಗಳಿಂದಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಸಾಧ್ಯವಾಗುತ್ತಿಲ್ಲ.
— Ramalinga Reddy (@RLR_BTM) January 24, 2021
ಅಂತಹ ಕ್ಷೇತ್ರಗಳ ಬಗ್ಗೆ ಹೆಚ್ಚು ಗಮನಹರಿಸುತ್ತೇನೆ ಎಂದು ಹೇಳಿದ್ದೇನೆ.
ಟ್ವೀಟ್ ಮೂಲಕ ವಿವರಣೆ ನೀಡಿರುವ ಅವರು, ನಾನು ಮಾಧ್ಯಮ ಮಿತ್ರರ ಪ್ರಶ್ನೆಗೆ ಉತ್ತರಿಸುತ್ತ, ಬೆಂಗಳೂರಿನಲ್ಲಿ 3 - 4 ಕ್ಷೇತ್ರಗಳ ಶಾಸಕರು ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿದ್ದಾರೆ ಮತ್ತು ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ 3 ಚುನಾವಣೆಗಳಿಂದಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಸಾಧ್ಯವಾಗುತ್ತಿಲ್ಲ. ಅಂತಹ ಕ್ಷೇತ್ರಗಳ ಬಗ್ಗೆ ಹೆಚ್ಚು ಗಮನಹರಿಸುತ್ತೇನೆ ಎಂದು ಹೇಳಿದ್ದೇನೆ. ಅಷ್ಟು ಬಿಟ್ಟರೆ ಇತ್ತೀಚಿಗೆ ರಾಜೀನಾಮೆ ನೀಡಿದವರನ್ನು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಕರೆದುಕೊಂಡು ಬರುತ್ತೇನೆ ಎಂದು ನಾನು ಯಾವುದೇ ರೀತಿಯ ಹೇಳಿಕೆಯನ್ನು ನೀಡಿಲ್ಲವೆಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದಿದ್ದಾರೆ.
ಇದನ್ನು ಓದಿ: 'ಇಬ್ಬರು ಶಾಸಕಿಯರನ್ನು ನೆಲಕ್ಕೆ ಕೆಡವಿದ್ದಕ್ಕೆ ಸರ್ಕಾರ ಮೊದಲು ಉತ್ತರ ಕೊಡಲಿ': ರಾಮಲಿಂಗಾರೆಡ್ಡಿ
ನಿನ್ನೆ ಜಯನಗರದಲ್ಲಿ ತಮಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ರಾಮಲಿಂಗರೆಡ್ಡಿ, ಪಕ್ಷ ಬಲಪಡಿಸುವ ವಿಚಾರ ಮಾತನಾಡಿದ ಸಂದರ್ಭ ಕಾಂಗ್ರೆಸ್ ರಾಮಲಿಂಗರೆಡ್ಡಿ ನೇತೃತ್ವದಲ್ಲಿ ಮತ್ತೊಮ್ಮೆ ಘರ್ ವಾಪಸಿ ಮಾಡುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ, ಸಾಮೂಹಿಕ ನಾಯಕತ್ವದಲ್ಲಿ ಎಂದು ಉತ್ತರಿಸಿದ್ದರು. ಇದೀಗ ಈ ಹೇಳಿಕೆ ರಾಜ್ಯ ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗಿಸುವ ಸಾಧ್ಯತೆ ಇರುವ ಹಿನ್ನೆಲೆ ಸ್ಪಷ್ಟೀಕರಣ ನೀಡುವ ಕಾರ್ಯ ಮಾಡಿದ್ದಾರೆ.