ದೇವನಹಳ್ಳಿ(ಬೆಂಗಳೂರು): ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆಯುತ್ತಿದೆ. ಶಿಕ್ಷಣ ಸಚಿವ ನಾಗೇಶ್ ಮನೆ ಮುಂದೆ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯನ್ನು ಅವರ ಮನೆಗೆ ಬೆಂಕಿ ಇಡಲು ಬಂದಿದ್ದರೆಂದು ಬಿಂಬಿಸಲಾಯಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.
ದೇವನಹಳ್ಳಿ ಕ್ಲಾರ್ಕ್ ಎಕ್ಸೋಟಿಕಾ ರೆಸಾರ್ಟ್ನಲ್ಲಿ ಕಾಂಗ್ರೆಸ್ ಪಕ್ಷ ಎರಡು ದಿನಗಳ ನವ ಸಂಕಲ್ಪ ಶಿಬಿರ ಆಯೋಜನೆ ಮಾಡಿದ್ದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಮಲಿಂಗರೆಡ್ಡಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತಿಭಟನೆ ನಡೆಸೋದು ಸಂವಿಧಾನದ ಹಕ್ಕು. ವಿದ್ಯಾರ್ಥಿಗಳೇನು ಬೆಂಕಿ ಹಚ್ಚಲು ಪೆಟ್ರೋಲ್ ಅಥವಾ ಸೀಮೆಎಣ್ಣೆ ತೆಗೆದುಕೊಂಡು ಹೋಗಿದ್ರಾ? ಎಂದು ಪ್ರಶ್ನಿಸಿದರು.
ಬಿಜೆಪಿಯವರು ಮಾಡೋದೆಲ್ಲ ಮಾಡಿ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುತ್ತಾರೆ. ಹುಟ್ಟು ಸುಳ್ಳುಗಾರರು. ಸುಳ್ಳು ಬಿಟ್ಟು ಬೇರೇನೂ ಅವರಿಗೆ ಬರಲ್ಲ. ದೇಶವನ್ನು ಇನ್ನೂ ಎಲ್ಲೆಲಿಗೆ ತೆಗೆದುಕೊಂಡು ಹೋಗ್ತಾರೋ ಗೊತ್ತಿಲ್ಲ ಎಂದು ಕಿಡಿಕಾರಿದರು.
ಇದನ್ನೂ ಓದಿ: ನೂರು ಅಡಿ ಆಳದ ಹಳ್ಳಕ್ಕೆ ಬಿದ್ದ ಸ್ಕೂಲ್ ಬಸ್: ಚಾಲಕನಿಗೆ ಗಂಭೀರ ಗಾಯ