ETV Bharat / state

ಭದ್ರಾ, ಕೃಷ್ಣಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯಾಗಿಸಲು ಯತ್ನ: ಸಚಿವ ರಮೇಶ್ ಜಾರಕಿಹೊಳಿ‌ - ಸಚಿವ ರಮೇಶ್ ಜಾರಕಿಹೊಳಿ‌

ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಇದೇ ೨೧ ರಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತರನ್ನು ನವದೆಹಲಿಯಲ್ಲಿ ಭೇಟಿ ಮಾಡಲಿದ್ದೇನೆ ಎಂದು ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

ಭದ್ರಾ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿಸಲು ಮನವಿ: ಸಚಿವ ರಮೇಶ್ ಜಾರಕಿಹೊಳಿ‌

author img

By

Published : Feb 13, 2021, 10:24 PM IST

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಇದೇ 21 ರಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತರನ್ನು ನವದೆಹಲಿಯಲ್ಲಿ ಭೇಟಿ ಮಾಡಲಿದ್ದೇನೆ ಎಂದು ಸಚಿವ ಜಲಸಂಪನ್ಮೂಲ ರಮೇಶ ಜಾರಕಿಹೊಳಿ ತಿಳಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಉತ್ತರ ಕರ್ನಾಟಕದ ಜೀವನಾಡಿ ಕಳಸಾ-ಬಂಡೂರಿ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವುದು ಮತ್ತು ರಾಜ್ಯದ ಹಲವು ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ‌ ಪಡೆಯುವುದೂ ಸೇರಿದಂತೆ ಹಲವು ಯೋಜನೆಗಳ ಕುರಿತಂತೆ ನನ್ನ ಜೊತೆ ಉನ್ನತ ಅಧಿಕಾರಿಗಳ ನಿಯೋಗ, ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ‌ ಮಾಡಿ ಚರ್ಚೆ ನಡೆಸಲಿದ್ದೇವೆ ಎಂದರು.

ಭೇಟಿಯ ನಂತರದ ದಿನದಲ್ಲಿ ಅಂತರ್ ರಾಜ್ಯ ಜಲವಿವಾದಗಳಿಗೆ ಸಂಬಂಧಿಸಿ, ರಾಜ್ಯದ ಅಡ್ವೋಕೇಟ್ ಜನರಲ್‌ ಮತ್ತು ಹಿರಿಯ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಯಲಿದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಪ್ರಕ್ರಿಯೆ ಕೊನೆಯ ಹಂತದಲ್ಲಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಸಹ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವುದರಿಂದ ರಾಜ್ಯಕ್ಕೆ ಹಲವು ರೀತಿಯ ಲಾಭವಾಗಲಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.