ETV Bharat / state

ರಮೇಶ್‌ ಜಾರಕಿಹೊಳಿ ಸಿಡಿ ಕೇಸ್ ತನಿಖೆ ಮುಕ್ತಾಯ, ವರದಿ ಸಿದ್ಧ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಹೈಕೋರ್ಟ್ ಗೆ ಸರ್ಕಾರದ ಮಾಹಿತಿ
ಹೈಕೋರ್ಟ್ ಗೆ ಸರ್ಕಾರದ ಮಾಹಿತಿ
author img

By

Published : Jul 5, 2021, 6:39 PM IST

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯಗೊಂಡಿದ್ದು, ಅಂತಿಮ ತನಿಖಾ ವರದಿ ಸಿದ್ದವಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಇದೇ ವೇಳೆ ಹೈಕೋರ್ಟ್ ತನಿಖಾ ವರದಿಯನ್ನು ಜುಲೈ 14ರವರೆಗೆ ಸಲ್ಲಿಸದಂತೆ ಪೊಲೀಸರಿಗೆ ನಿರ್ದೇಶಿಸಿದೆ.

ಈ ವೇಳೆ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪೀಠಕ್ಕೆ ಮಾಹಿತಿ ನೀಡಿ, ಪ್ರಕರಣದ ತನಿಖೆ ಮುಕ್ತಾಯಗೊಂಡಿದೆ. ಅಂತಿಮ ತನಿಖಾ ವರದಿಯೂ ಸಿದ್ದವಿದೆ ಎಂದು ತಿಳಿಸಿದರು. ಹೇಳಿಕೆ ದಾಖಲಿಸಿಕೊಂಡ ಪೀಠ ಜುಲೈ 14ರವರೆಗೆ ತನಿಖಾ ವರದಿಯನ್ನು ಸಲ್ಲಿಸದಂತೆ ಎಸ್ಐಟಿ ಪೊಲೀಸರಿಗೆ ನಿರ್ದೇಶಿಸಿತು. ಯುವತಿ ಸಲ್ಲಿಸಿರುವ ದಾಖಲೆಗಳ ಇಂಗ್ಲಿಷ್ ಅನುವಾದವನ್ನು ನ್ಯಾಯಾಲಯಕ್ಕೆ ಸಲ್ಲಿಸದ ವಿಚಾರ ಪರಿಗಣಿಸಿ ಪೀಠ ಈ ನಿರ್ದೇಶನ ನೀಡಿತಲ್ಲದೇ, ಯುವತಿ ಪರ ವಕೀಲರಿಗೆ ಇಂಗ್ಲಿಷ್ ಅನುವಾದದ ಪ್ರತಿಗಳನ್ನು ಸಲ್ಲಿಸುವಂತೆ ಸೂಚಿಸಿತು.

ಇದನ್ನೂ ಓದಿ : ಅನ್ಲಾಕ್ 3 ಜಾರಿ: ಕರುನಾಡು ಸಂಪೂರ್ಣ ಓಪನ್; ಸಹಜ ಸ್ಥಿತಿಯತ್ತ ಬೆಂಗಳೂರು

ಇದೇ ವೇಳೆ ಅರ್ಜಿದಾರರ ಪರ ವಕೀಲರಾದ ಜಿ.ಆರ್ ಮೋಹನ್ ವಾದ ಮಂಡಿಸಿ. ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ವಿಚಾರಣೆ ವೇಳೆ ಸಚಿವರಾದ ಮಾಧುಸ್ವಾಮಿ ಮತ್ತು ಸುಧಾಕರ್ ಅವರುಗಳು ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ. ಇದು ಲೈಂಗಿಕ ದೌರ್ಜನ್ಯ ಕೇಸ್ ಅಲ್ಲವೆಂದು ಸಚಿವರು ಹೇಳಿಕೆ ನೀಡಿದ್ದು, ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಪ್ರಕರಣವನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ತನಿಖೆ ಕುರಿತಂತೆ ಉತ್ತರಿಸಲು ಸರ್ಕಾರವಿದೆ ಎಂದಷ್ಟೇ ತಿಳಿಸಿ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.