ETV Bharat / state

ಸಿಡಿ ಹಿಂದೆ ಕೆಲ ಬಿಜೆಪಿ ನಾಯಕರ ಷಡ್ಯಂತ್ರ ಇದೆಯೇ? ಈ ಪ್ರಶ್ನೆಗೆ ಜಾರಕಿಹೊಳಿ ಉತ್ತರ ಹೀಗಿದೆ! - ಜಾರಕಿಹೊಳಿ ಸಿಡಿ ಪ್ರಕರಣ

ಸಿಡಿ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿರುವ ಶಾಸಕ ರಮೇಶ್ ಜಾರಕಿಹೊಳಿ, ಇದರ ಹಿಂದೆ ಬಿಜೆಪಿ ಕೈವಾಡವಿದೆಯೇ ಎಂಬ ಪ್ರಶ್ನೆಗೆ ಸಂಶಯಾಸ್ಪದವಾಗಿ ಉತ್ತರ ನೀಡಿದ್ದಾರೆ.

Ramesh Jarakiholi
Ramesh Jarakiholi
author img

By

Published : Mar 28, 2021, 12:41 AM IST

ಬೆಂಗಳೂರು: ಸಿಡಿ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸ್ಫೋಟಕ ಮಾಹಿತಿ ಬಿಚ್ಚಿಡುತ್ತೇನೆ ಎಂಧು ಹೇಳಿಕೆ ನೀಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಮಾತನಾಡಿದ್ದು, ಡಿಕೆ ಶಿವಕುಮಾರ್​ ವಿರುದ್ಧ ತೊಡೆತಟ್ಟಿದ್ದಾರೆ. ಎಸ್​ಐಟಿ ವಿಚಾರಣೆ ವೇಳೆ ಸಿಡಿ ಸಂತ್ರಸ್ತೆ ಪೋಷಕರು ಇದಕ್ಕೆಲ್ಲ ಕಾರಣ ಡಿಕೆ ಶಿವಕುಮಾರ್ ಎಂದು ನೇರವಾಗಿ ಆರೋಪ ಮಾಡಿದ್ದಾರೆ. ತಮ್ಮ ಹೊಲಸು ರಾಜಕಾರಣಕ್ಕೆ ಹೆಣ್ಣು ಮಗಳ ಬಳಕೆ ಮಾಡಿಕೊಂಡಿದ್ದಾರೆ ಎಂದು ಆಪಾದಿಸಿದ್ದರು.

ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ

ಇದನ್ನೂ ಓದಿ: ಕಾಂಗ್ರೆಸ್ 'ಸಿಡಿ' ತಯಾರು ಮಾಡುವ ಗ್ಯಾಂಗ್: ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ

ಇದೇ ವೇಳೆ ಸಿಡಿ ಪ್ರಕರಣದಲ್ಲಿ ಬಿಜೆಪಿ ನಾಯಕರೂ ಷಡ್ಯಂತ್ರ ಮಾಡಿದ್ದಾರಾ? ಎಂಬ ಪ್ರಶ್ನೆಗೆ ರಮೇಶ್ ಜಾರಕಿಹೊಳಿ ಸಂಶಯಾಸ್ಪದವಾಗಿ ಉತ್ತರ ನೀಡಿದ್ದಾರೆ. ಸುದ್ದಿಗಾರರು ಕೇಳಿರುವ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವಾಗಿ ಅಮಿತ್ ಶಾ ಮತ್ತು ಯಡಿಯೂರಪ್ಪ ಜೊತೆ ಮಾತ‌ನಾಡುತ್ತೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಈ ಮೂಲಕ ಅಡ್ಡ ಗೋಡೆ ಮೇಲೆ ದೀಪ ಇಟ್ಟಿರುವ ರೀತಿಯಲ್ಲಿ ಮಾತನಾಡಿದ್ದಾರೆ. ಈಗಾಗಲೇ ಸಿಡಿ ಪ್ರಕರಣ ಹಿಂದೆ ಕೆಲ ಬಿಜೆಪಿ‌ ನಾಯಕರೂ ಇದ್ದಾರೆಂಬ ಆರೋಪ ಕೇಳಿ ಬರುತ್ತಿತ್ತು. ಅದಕ್ಕೆ ಪೂರಕವಾಗಿ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ವೇಳೆ ಈ ರೀತಿಯಾಗಿ ಮಾತನಾಡಿದ್ದು, ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.