ETV Bharat / state

ರಮೇಶ್​ ಜಾರಕಿಹೊಳಿ ಸಿಡಿ ಕೇಸ್‌: 24 ಗಂಟೆಯೊಳಗೆ ನಡೆದಿದ್ದೇನು? ಇಲ್ಲಿದೆ ಸಂಪೂರ್ಣ ಚಿತ್ರಣ.. - ರಮೇಶ್ ವಿಡಿಯೋ

ಸಿಎಂ ಯಡಿಯೂರಪ್ಪನವರಿಗೆ ಕರೆ ಮಾಡಿದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜೀನಾಮೆ ಪಡೆದುಕೊಳ್ಳುವಂತೆ ಸೂಚನೆ ನೀಡಿದರು.‌ ಸಿಎಂ ಸೂಚನೆಯಂತೆ ಸಹೋದರ ರಮೇಶ್ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಭವಿಷ್ಯದಲ್ಲಿ ಆರೋಪ ಮುಕ್ತನಾದ ನಂತರ ಮತ್ತೆ ಸಚಿವ ಸ್ಥಾನ ನೀಡಬೇಕು ಎನ್ನುವ ಷರತ್ತಿನೊಂದಿಗೆ ರಾಜೀನಾಮೆ ನೀಡಲು ಸಮ್ಮತಿಸಿದರು.

ramesh-jarakiholi-cd-case
ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ
author img

By

Published : Mar 3, 2021, 4:54 PM IST

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಸಲೀಲೆ ಸಿಡಿ ಬಹಿರಂಗದ ನಂತರ ಸಿಎಂ ಯಡಿಯೂರಪ್ಪ ಸಂಪುಟದಿಂದ ಅವರು ಹೊರನಡೆದಿದ್ದಾರೆ.

ಸಿಡಿ ಬಿಡುಗಡೆಯಿಂದ ರಾಜೀನಾಮೆ ನೀಡುವವರೆಗಿನ ಸಮಗ್ರ ಮಾಹಿತಿ ಇಲ್ಲಿದೆ..

- ಮಾರ್ಚ್ 2ರ ಮಧ್ಯಾಹ್ನ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವ ಸಿಡಿ ಬಹಿರಂಗ. ಅದರ ಬೆನ್ನಲ್ಲೇ ಮಾಹಿತಿ ಹಕ್ಕು ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಂತ್ರಸ್ತೆ ಪರ ಕಬ್ಬನ್ ಪಾರ್ಕ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದರು. ಇಷ್ಟಾದರೂ ರಮೇಶ್ ಜಾರಕಿಹೊಳಿ ಮಾತ್ರ ಇದು ನಕಲಿ ಸಿಡಿ ಎಂದು ಸಮರ್ಥನೆ ಮಾಡಿಕೊಂಡಿದ್ದರು.

- ಇಂದು ಬೆಳಗ್ಗೆ ನಡೆದಿದ್ದೇ ಬೇರೆ. ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಸಿಡಿ ಬಹಿರಂಗ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಹೈಕಮಾಂಡ್ ರಂಗ ಪ್ರವೇಶ ಮಾಡಿತು. ಕೇಂದ್ರ ವರಿಷ್ಠರ ಸೂಚನೆಯಂತೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜೊತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಮಾತುಕತೆ ನಡೆಸಿದರು. ಜಾರಕಿಹೊಳಿಯಿಂದ ರಾಜೀನಾಮೆ ಪಡೆದುಕೊಳ್ಳಬೇಕು, ಯಾವ ಕಾರಣಕ್ಕೂ ಅವರನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸಂತೋಷ್ ಅಭಿಪ್ರಾಯ ವ್ಯಕ್ತಪಡಿಸಿದರು.

- ನಂತರ ಸಿಎಂ ಯಡಿಯೂರಪ್ಪಗೆ ಕರೆ ಮಾಡಿದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆದುಕೊಳ್ಳುವಂತೆ ಸೂಚನೆ ನೀಡಿದರು.‌ ಹೈಕಮಾಂಡ್ ಸೂಚನೆ ಬರುತ್ತಿದ್ದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗಣಿ ಮತ್ತು ಭೂವಿಜ್ಞಾ‌ನ ಸಚಿವ ಮುರುಗೇಶ್ ನಿರಾಣಿ ಸೇರಿ ಕೆಲ ಹಿರಿಯ ಸಚಿವರನ್ನು ನಿವಾಸಕ್ಕೆ ಕರೆಸಿಕೊಂಡ ಸಿಎಂ ಸಮಗ್ರ ಸಮಾಲೋಚನೆ ನಡೆಸಿದರು. ಸಂಪುಟ ಸಹೋದ್ಯೋಗಿಗಳ ಅಭಿಪ್ರಾಯ ಪಡೆದು ನಂತರ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯಲು ಮುಂದಾದರು.

- ಈ ಸಂಬಂಧ ಬೆಳಗ್ಗೆ 9 ಗಂಟೆಗೆ ಸಿಎಂ ಯಡಿಯೂರಪ್ಪ ತಮ್ಮ ಅಧಿಕೃತ ನಿವಾಸ ಕಾವೇರಿಗೆ ರಮೇಶ್ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರನ್ನು ಕರೆಸಿಕೊಂಡು ಮಾತುಕತೆ ನಡೆಸಿದರು.‌ ಸದ್ಯಕ್ಕೆ ರಾಜೀನಾಮೆ ನೀಡದೇ ಬೇರೆ ಮಾರ್ಗವಿಲ್ಲ, ಹೈಕಮಾಂಡ್ ನಿರ್ದೇಶನ ನೀಡಿದೆ ಅಲ್ಲದೆ ನಾಳೆಯಿಂದ ಅಧಿವೇಶನ ನಡೆಯಲಿದ್ದು ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರವಾಗಲಿದೆ. ಹೀಗಾಗಿ ರಮೇಶ್ ಜಾರಕಿಹೊಳಿ ಅವರನ್ನು ರಾಜೀನಾಮೆ ನೀಡಲು ಒಪ್ಪಿಸುವಂತೆ ಸೂಚನೆ ನೀಡಿದರು.

- ಸಿಎಂ ಸೂಚನೆಯಂತೆ ಸಹೋದರ ರಮೇಶ್ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಭವಿಷ್ಯದಲ್ಲಿ ಆರೋಪ ಮುಕ್ತನಾದ ನಂತರ ಮತ್ತೆ ಸಚಿವ ಸ್ಥಾನ ನೀಡಬೇಕು ಎನ್ನುವ ಷರತ್ತಿನೊಂದಿಗೆ ರಾಜೀನಾಮೆ ನೀಡಲು ಸಮ್ಮತಿಸಿದರು. ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರೊಂದಿಗೂ ದೂರವಾಣಿ ಮೂಲಕ ಮಾತುಕತೆ ನಡೆಸಿ ರಾಜೀನಾಮೆ ನೀಡುವುದಕ್ಕೆ ಸಮ್ಮತಿಸಿದರು. ಬಳಿಕ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರ ಕೈಯಲ್ಲೇ ರಮೇಶ್ ಜಾರಕಿಹೊಳಿ ತಮ್ಮ ರಾಜೀನಾಮೆ ಪತ್ರವನ್ನು ಸಿಎಂ ಯಡಿಯೂರಪ್ಪ ಅವರಿಗೆ ಕಳುಹಿಸಿಕೊಟ್ಟರು.

- ರಾಜೀನಾಮೆ ಪತ್ರ ಹಿಡಿದು ಮತ್ತೆ ಸಿಎಂ ನಿವಾಸ ಕಾವೇರಿಗೆ ಆಗಮಿಸಿದ ಬಾಲಚಂದ್ರ ಜಾರಕಿಹೊಳಿ‌ ಸಹೋದರನ ರಾಜೀನಾಮೆ ಪತ್ರವನ್ನು ಸಿಎಂಗೆ ಹಸ್ತಾಂತರಿಸಿದರು. ರಾಜೀನಾಮೆಗೆ ಸಮ್ಮತಿಸಿದ ಸಿಎಂ, ರಾಜೀನಾಮೆ ಪತ್ರಕ್ಕೆ ಸ್ವೀಕೃತಿ ಸಹಿ ಹಾಕಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ನೀಡಿರುವ ರಾಜೀನಾಮೆ ಅಂಗೀಕರಿಸುವಂತೆ ರಾಜ್ಯಪಾಲರಿಗೆ ಯಡಿಯೂರಪ್ಪ ಪತ್ರ ಕಳುಹಿಸಿಕೊಟ್ಟಿದ್ದಾರೆ.

'ದೆಹಲಿಗೆ ಬರಬೇಡಿ'

- ವಿಡಿಯೋ ಬಹಿರಂಗವಾಗುತ್ತಿದ್ದಂತೆ ನವದೆಹಲಿಗೆ ತೆರಳಲು ರಮೇಶ್ ಜಾರಕಿಹೊಳಿ ನಿರ್ಧರಿಸಿದ್ದರು. ಈ ಬಗ್ಗೆ ಮಾಧ್ಯಮಗಳಿಗೂ ಹೇಳಿಕೆ ನೀಡಿದ್ದರು. ವಿಡಿಯೋ ನಕಲಿಯಾಗಿದ್ದು ಈ ಬಗ್ಗೆ ವರಿಷ್ಠರಿಗೆ ಮಾಹಿತಿಯೊಂದಿಗೆ ಸ್ಪಷ್ಟೀಕರಣ ನೀಡುವುದಾಗಿ ತಿಳಿಸಿದ್ದರು. ಆದರೆ ಏಕಾಏಕಿ ದೆಹಲಿ ಪ್ರವಾಸ ರದ್ದಾಗಿದೆ. ಬಿಜೆಪಿ ಹೈಕಮಾಂಡ್ ನಾಯಕರು ರಮೇಶ್ ಜಾರಕಿಹೊಳಿ ಭೇಟಿಗೆ ನಿರಾಕರಿಸಿದ್ದಾರೆ. ಸದ್ಯ ದೆಹಲಿಗೆ ಬರುವುದು ಬೇಡ ಎನ್ನುವ ಸೂಚನೆ ನೀಡಿದ್ದಾರೆ. ಹಾಗಾಗಿ ಜಾರಕಿಹೊಳಿ ದೆಹಲಿಗೆ ತೆರಳಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ರಮೇಶ್​ ರಾಜೀನಾಮೆಯಿಂದ ತೆರವಾದ ಸಚಿವ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಬಾಲಚಂದ್ರ ಜಾರಕಿಹೊಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.