ಬೆಂಗಳೂರು: ಸಿಡಿ ಪ್ರಕರಣದ ತನಿಖೆ ನಡೆಸಲು ಆರೋಪಿ ರಮೇಶ್ ಜಾರಕಿಹೊಳಿ ಕೋರಿಕೆ ಮೇರೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ ಕ್ರಮ ಹಾಗೂ ಜಾರಕಿಹೊಳಿ ದೂರು ಆಧರಿಸಿ ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಸಂತ್ರಸ್ತೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಮಾ.22ಕ್ಕೆ ಮುಂದೂಡಿದೆ.
ಈ ಕುರಿತಂತೆ ಸಂತ್ರಸ್ತೆ ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ನ್ಯಾ.ಎಂ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸಂತ್ರಸ್ತೆ ಪರ ವಕೀಲರು ಪ್ರಕರಣದ ವಿಚಾರಣೆಯನ್ನು ಒಂದು ವಾರ ಕಾಲ ಮುಂದೂಡುವಂತೆ ಮನವಿ ಮಾಡಿದರು. ಕೋರಿಕೆ ಪರಿಗಣಿಸಿದ ಪೀಠ ವಿಚಾರಣೆಯನ್ನು ಮಾ.22ಕ್ಕೆ ಮುಂದೂಡಿತು.
ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಏಕಸದಸ್ಯ ಪೀಠಕ್ಕೆ ಸಂತ್ರಸ್ತೆ ಅರ್ಜಿಗಳು ವರ್ಗಾವಣೆ
ಸಿಡಿ ಕೇಸ್ ತನಿಖೆಗೆ ಎಸ್ಐಟಿ ರಚಿಸಿದ ಕ್ರಮ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಬಾಕಿ ಇದ್ದಾಗಲೇ ತನಿಖಾ ವರದಿಯನ್ನು ಸಂಬಂಧಪಟ್ಟ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಸಲ್ಲಿಸಲು ಹೈಕೋರ್ಟ್ ಅನುಮತಿಸಿತ್ತು. ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ಫೆ.18ರಂದು ತಡೆ ನೀಡಿತ್ತು.
ಅಲ್ಲದೇ, ತನಿಖಾ ವರದಿ ಆಧರಿಸಿ ಯಾವುದೇ ಕ್ರಮ ಜರುಗಿಸದಂತೆ ನಿರ್ದೇಶಿಸಿತ್ತು. ಆ ಬಳಿಕ ನಡೆದ ವಿಚಾರಣೆ ವೇಳೆ ಹೈಕೋರ್ಟ್ ವಿಭಾಗೀಯ ಪೀಠ, ಸಂತ್ರಸ್ತೆಯ ಅರ್ಜಿಗಳನ್ನು ಏಕ ಸದಸ್ಯ ಪೀಠಕ್ಕೆ ವರ್ಗಾಯಿಸಿತ್ತು.
ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ