ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ರನ್ನು ಮಂಗಳವಾರ ರಾಜ್ಯ ಸರ್ಕಾರದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಚರ್ಚೆ ನಡೆಸಿದರು.
ನಿನ್ನೆಯ ಕೇಂದ್ರ ಬಜೆಟ್ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ, ಕಿತ್ತೂರು ರಾಣಿ ಚೆನ್ನಮ್ಮ ಹೆಸರಿನಲ್ಲಿ ಹೆಣ್ಣು ಮಕ್ಕಳಿಗೆ ಮತ್ತು ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಗಂಡು ಮಕ್ಕಳಿಗೆ ಬೆಳಗಾವಿ ಭಾಗದಲ್ಲಿ ಆದ್ಯತೆಯ ಮೇರೆಗೆ ಸೈನಿಕ ಶಾಲೆ ಪ್ರಾರಂಭಿಸಬೇಕೆಂದು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಿದರು.
ಈ ಕುರಿತು ಪ್ರಧಾನಮಂತ್ರಿಗಳಿಗೂ ಪತ್ರ ಬರೆದು ಮನವಿ ಸಲ್ಲಿಸಲಾಗುವುದು ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಇದನ್ನು ಓದಿ:ನನ್ನ ಮನೆ ಬಾಗಿಲು ಸದಾ ತೆರೆದಿರುತ್ತೆ, ಬಂದು ನಿಮ್ಮ ಸಮಸ್ಯೆ ಹೇಳಿಕೊಳ್ಳಿ: ಅಸಮಧಾನಿತರಿಗೆ ಸಿಎಂ ಆಹ್ವಾನ..!