ETV Bharat / state

ಹಿಂದೂ ಪದದ ವಿಚಾರವಾಗಿ ಸತೀಶ್ ಜಾರಕಿಹೊಳಿ ಹೇಳಿಕೆ ನಾವು ಖಂಡಿಸುತ್ತೇವೆ: ಸುರ್ಜೇವಾಲಾ

ಹಿಂದೂ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಖಂಡಿಸಿದ್ದಾರೆ

randeep-singh-surjewala-condemns-sathish-jarkiholi-statement
ಹಿಂದು ಪದದ ವಿಚಾರವಾಗಿ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ನಾವು ಖಂಡಿಸುತ್ತೇವೆ: ಸುರ್ಜೇವಾಲಾ
author img

By

Published : Nov 7, 2022, 9:47 PM IST

ಬೆಂಗಳೂರು : ಹಿಂದೂ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಖಂಡಿಸಿದ್ದಾರೆ. ಸತೀಶ್ ಜಾರಕಿಹೊಳಿ ಹೇಳಿಕೆ ತೀವ್ರ ವಿವಾದ ಸೃಷ್ಟಿಸುವ ಸನ್ನಿವೇಶ ಗೋಚರಿಸುತ್ತಿರುವ ಬೆನ್ನಲ್ಲೇ ಸುರ್ಜೇವಾಲಾ ಈ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಿಂದೂ ಧರ್ಮ ಒಂದು ಜೀವನ ಪದ್ಧತಿ ಮತ್ತು ನಾಗರೀಕತೆಯ ವಾಸ್ತವ. ಪ್ರತಿಯೊಂದು ಧರ್ಮ, ನಂಬಿಕೆಯನ್ನು ಗೌರವಿಸಲು ಕಾಂಗ್ರೆಸ್ ನಮ್ಮ ರಾಷ್ಟ್ರವನ್ನು ನಿರ್ಮಿಸಿದೆ. ಇದು ಭಾರತದ ಸತ್ವ. ಸತೀಶ್ ಜಾರಕಿಹೊಳಿ ಅವರ ಹೇಳಿಕೆಯು ಅತ್ಯಂತ ದುರದೃಷ್ಟಕರ ಮತ್ತು ತಿರಸ್ಕರಿಸಲು ಅರ್ಹವಾಗಿದೆ. ನಾವು ಹೇಳಿಕೆಯನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

  • Hinduism is a way of life & a civilisational reality. Congress built our Nation to respect every religion, belief & faith. This is the essence of India.

    The statement attributed to Satish Jarkiholi is deeply unfortunate & deserves to be rejected. We condemn it unequivocally.

    — Randeep Singh Surjewala (@rssurjewala) November 7, 2022 " class="align-text-top noRightClick twitterSection" data=" ">

ಹಿಂದೂ ಎಂಬ ಪದ ಮೂಲತಃ ಭಾರತದ್ದಲ್ಲ, ಅದು ಪರ್ಷಿಯಾದಿಂದ ಬಂದ ಪದ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಅಸಲಿಗೆ ಹಿಂದೂ ಎಂಬ ಪದಕ್ಕೆ ಪರ್ಷಿಯಾ ಭಾಷೆಯಲ್ಲಿ ಅಶ್ಲೀಲವಾದ ಅರ್ಥಗಳಿವೆ ಎಂದು ಅವರು ಹೇಳಿದ್ದು, ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಾಕಷ್ಟು ಹಿಂದೂಪರ ಸಂಘಟನೆಗಳು ಮತ್ತು ನಾಗರೀಕರು ಇವರ ಹೇಳಿಕೆಯನ್ನು ಖಂಡಿಸಿದ್ದಾರೆ. ಈ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರವಾಗಿದ್ದು, ಮುಂದಿನ ದಿನಗಳಲ್ಲಿ ಇದು ದೊಡ್ಡ ಸಮಸ್ಯೆ ಇಲ್ಲವೇ ವಿವಾದವಾಗಿ ಸೃಷ್ಟಿಯಾಗಬಾರದು ಎಂದು ವಿಚಾರವನ್ನು ಕಾಂಗ್ರೆಸ್ ಖಂಡಿಸಿದೆ.

ಇದನ್ನೂ ಓದಿ : ಸತೀಶ್ ಜಾರಕಿಹೊಳಿ ಒಬ್ಬ ನಾಸ್ತಿಕ, ಹಿಂದೂ ವಿರೋಧಿ: ಪ್ರಮೋದ್ ಮುತಾಲಿಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.