ಬೆಂಗಳೂರು: ಮುಂಬರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ವರ್ಚುವಲ್ ಮೂಲಕ ಮಹತ್ವದ ಸಭೆ ನಡೆಸಿದರು.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪಕ್ಷದ ಪ್ರಮುಖ ನಾಯಕರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾವೇರಿ ಹಾಗೂ ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳ ವ್ಯಾಪ್ತಿಯ 2019 ರ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳು, ಶಾಸಕರು, ಎಂಎಲ್ಸಿಗಳು, 2018 ರ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಪಾಲ್ಗೊಂಡಿದ್ದರು.
ಇದನ್ನೂ ಓದಿ: ಕೊರೊನಾ ನಿಯಂತ್ರಣ: ಸಿಎಂ, ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಚಿವ ಕತ್ತಿ
2023ರ ವಿಧಾನಸಭೆ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ದೃಷ್ಟಿಯಿಂದ ಈ ಸಭೆ ಆಯೋಜಿಸಲಾಗಿತ್ತು. ಈ ಮೂಲಕ ಪಕ್ಷದ ನಾಯಕರು ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಲಾಕ್‌ಡೌನ್ ಕಾರಣ ನೇರವಾಗಿ ಮುಖಂಡರನ್ನು ಭೇಟಿಯಾಗಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವರ್ಚುವಲ್ ಸಭೆ ನಡೆಸಲಾಗಿದೆ.