ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ನಡೆಸಿದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಆರೋಪಿ ರಾಜಣ್ಣ ವಿಜಯನಗರ ಬಳಿ ಇರುವ ಅಪ್ರಾಪ್ತ ಬಾಲಕಿ ಮನೆಗೆ ನುಗ್ಗಿ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಬಾಲಕಿಗೆ 20 ರೂಪಾಯಿ ನೀಡುವುದಾಗಿ ಆಸೆ ತೋರಿಸಿದ್ದಾನೆ. ಬಳಿಕ ಆಕೆಯನ್ನ ಯಾರು ಇಲ್ಲದ ಕಡೆ ಕರೆದುಕೊಂಡು ಹೋಗಿ, ಆಕೆಯ ಮೇಲೆ ಅತ್ಯಾಚಾರವೆಸಗಿ ಯಾರಿಗೂ ಹೇಳದಂತೆ ಆಕೆಗೆ ಬೆದರಿಕೆ ಹಾಕಿದ್ದಾನೆ. ನಂತ್ರ ಅಪ್ರಾಪ್ತೆಯ ತಾಯಿಗೆ ವಿಚಾರ ತಿಳಿದು ವಿಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ ಕಾರಣ ಆರೋಪಿ ರಾಜಣ್ಣ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.
ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಪೂರ್ಣಗೊಂಡು ನ್ಯಾಯಾಲಯ ಆರೋಪಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.