ETV Bharat / state

ಅಪಹರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಕಾಮುಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆಂಗಳೂರು ಕೋರ್ಟ್ - ಈಟಿವಿ ಭಾರತ್ ಕನ್ನಡ

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ಅಪರಾಧಿಗೆ ಶಿಕ್ಷೆ. ಅತ್ಯಾಚಾರಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಬೆಂಗಳೂರು ಕೋರ್ಟ್​ ತೀರ್ಪು.

ಬೆಂಗಳೂರು ಕೋರ್ಟ್
ಬೆಂಗಳೂರು ಕೋರ್ಟ್
author img

By

Published : Sep 19, 2022, 7:55 PM IST

ಬೆಂಗಳೂರು: ಅಪ್ರಾಪ್ರೆಯ ಮೇಲೆ ಅತ್ಯಾಚಾರ ನಡೆಸಿದ್ದ ಅಪರಾಧಿಗೆ 20 ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ನಗರದ ತ್ವರಿತಗತಿ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದ ವಿಚಾರಣೆ ನಡೆಸಿ ತ್ವರಿತಗತಿಯ ನ್ಯಾಯಾಲಯದ ನ್ಯಾಯಾಧೀಶ ಎ.ಜಿ.ಗಂಗಾಧರ್​ ಅವರು ಈ ಆದೇಶ ನೀಡಿದ್ದಾರೆ. ಅಲ್ಲದೇ, ದಂಡದ ಮೊತ್ತ ಪಾವತಿಸದಿದ್ದಲ್ಲಿ ಆರು ತಿಂಗಳ ಕಾಲ ಹೆಚ್ಚುವರಿಯಾಗಿ ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಅಪಹರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ನಂದಿನಿ ಬಡಾವಣೆಯ ನಂಜುಂಡೇಶ್ವರ ನಗರದ ನಿವಾಸಿ ಆಟೋ ಚಾಲಕ ಸೈಯದ್​ ಖಾಜಾ (28) ಎಂಬುವರು 17 ವರ್ಷದ ಅಪ್ರಾಪ್ರೆಯನ್ನು 2018ರ ಡಿಸೆಂಬರ್​ 14ರಂದು ಅಪಹರಣ ಮಾಡಿದ್ದರು. ಬಳಿಕ ಕೆಂಗೇರಿ ಬಳಿಯಲ್ಲಿ ಮನೆಯಲ್ಲಿರಿಸಿ ಒತ್ತಾಪೂರ್ವಕವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದ. ಅಲ್ಲದೇ, ಅಪ್ರಾಪ್ತೆಯ ವಿರೋಧದ ನಡುವೆ ವಿವಾಹವಾಗುವಂತೆ ಒತ್ತಾಯಿಸುತ್ತಿದ್ದ ಎಂದು ಸಂತ್ರಸ್ತೆಯ ಪೋಷಕರು ನಂದಿನಿ ಬಡಾವಣೆಯ ಪೊಲೀಸ್​ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಪ್ರಕರಣದ ತನಿಖೆ ಕೈಗೊಂಡಿದ್ದ ಇನ್ಸ್​ಪೆಕ್ಟರ್​ ಬಿ.ಎನ್​.ಲೋಹಿತ್, ಸಂತ್ರಸ್ತೆ ಬಾಲಕಿಯನ್ನು ರಕ್ಷಣೆ ಮಾಡಿ ಆರೋಪಿ ವಶಕ್ಕೆ ಪಡೆದಿದ್ದರು. ಅಲ್ಲದೇ, ಪ್ರಕರಣ ಸಂಬಂಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

(ಇದನ್ನೂ ಓದಿ: ಗ್ಯಾಂಗ್​​ರೇಪ್​​ ಆರೋಪಿಗಳ ಮನೆಯನ್ನು ಜೆಸಿಬಿಯಿಂದ ಧ್ವಂಸಗೊಳಿಸಿದ ಜಿಲ್ಲಾಡಳಿತ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.