ETV Bharat / state

ಬೆಂಗಳೂರಲ್ಲಿ ಆ್ಯಸಿಡ್​ ದಾಳಿ ಬೆನ್ನಲ್ಲೇ ಮತ್ತೊಂದು ಹೀನಕೃತ್ಯ.. ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ - ಬೆಂಗಳೂರಿನ ತಿಗಳರಪಾಳ್ಯದಲ್ಲಿ ಮಹಿಳೆ ಮೇಲೆ ಅತ್ಯಾಚಾರ

ಮಹಿಳೆಯನ್ನು ಕರೆದೊಯ್ದು ಮದ್ಯಪಾನ ಮಾಡಿಸಿ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

rape-on-a-woman-in-bengaluru
ಮಹಿಳೆಗೆ ಮೇಲೆ ಅತ್ಯಾಚಾರ
author img

By

Published : Apr 30, 2022, 8:27 PM IST

ಬೆಂಗಳೂರು: ರಾಜಧಾನಿಯಲ್ಲಿ ಯುವತಿಯ ಮೇಲೆ ಆ್ಯಸಿಡ್ ದಾಳಿ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹೀನಕೃತ್ಯ ಬೆಳಕಿಗೆ ಬಂದಿದೆ. ಮಹಿಳೆಯನ್ನು ಕರೆದೊಯ್ದು ಮದ್ಯಪಾನ ಮಾಡಿಸಿ ಬಳಿಕ ಆಕೆಯ ಮೇಲೆ ಕಾಮುಕನೋರ್ವ ಅತ್ಯಾಚಾರ ಎಸಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬೆಂಗಳೂರು ಪೂರ್ವ ವಿಭಾಗದ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದೆ. ಆರೋಪಿಯು ಮಹಿಳೆಯನ್ನು ಇಲ್ಲಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮದ್ಯಪಾನ ಮಾಡಿಸಿದ್ದಾನೆ. ನಂತರ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾಮುಕನ ಅಟ್ಟಹಾಸಕ್ಕೆ ಬಳಲಿದ ಮಹಿಳೆಯ ಕೂಗಾಟ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಬ್ಯಾಡರಹಳ್ಳಿ ಠಾಣೆ ಪೊಲೀಸರು ಆರೋಪಿ ನರಸಿಂಹರಾಜುನನ್ನು ಬಂಧಿಸಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಅಕೌಂಟೆಂಟ್ ಕೊಲೆ ಪ್ರಕರಣಕ್ಕೆ ಟ್ವಿಸ್ಟ್​: ವಿವಾಹೇತರ ಸಂಬಂಧಕ್ಕಾಗಿ ಪತಿಯನ್ನೇ ಮುಗಿಸಿದ ಪತ್ನಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.