ETV Bharat / state

ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ - ಬೆಂಗಳೂರಿನ 51ನೇ ಸಿಸಿಎಚ್ ನ್ಯಾಯಾಲಯ

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ ಬೆಂಗಳೂರಿನ 51ನೇ ಸಿಸಿಎಚ್ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿದೆ.

Offender sentenced to 10 years in prison
ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ
author img

By

Published : Apr 14, 2021, 7:08 PM IST

ಬೆಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಲಯ ಅಪರಾಧಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ಆರ್​ಟಿ ನಗರ ನಿವಾಸಿ ಯಶೋವರ್ಧನ ರೆಡ್ಡಿ ಶಿಕ್ಷೆಗೆ ಒಳಗಾಗಿರುವ ಅಪರಾಧಿ. ಈತ 2014ರ ಜನವರಿಯಲ್ಲಿ ಪರಿಚಿತ ಬಾಲಕಿ ಪುಸಲಾಯಿಸಿ ಮನೆಗೆ ಕರೆದೊಯ್ದು ಮದ್ಯಪಾನ ಮಾಡಿಸಿದ್ದ. ನಂತರ ಅಮಲಿನಲ್ಲಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಕೃತ್ಯ ಬೆಳಕಿಗೆ ಬಂದ ನಂತರ ಪೋಷಕರು ಆರೋಪಿ ವಿರುದ್ಧ ದೂರು ನೀಡಿದ್ದರು. ಈ ಸಂಬಂಧ ಹೆಬ್ಬಾಳ ಠಾಣೆ ಪೊಲೀಸರು ಆರೋಪಿ ಯಶೋವರ್ಧನ ರೆಡ್ಡಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಹಾಗೂ ಪೋಕ್ಸೋ ಕಾಯ್ದೆಯ ಸೆಕ್ಷನ್ 6, 5(ಎಲ್)(ಜೆ) ಅಡಿ ಪ್ರಕರಣ ದಾಖಲಿಸಿದ್ದರು. ಬಳಿಕ ನಗರದ 51ನೇ ಸಿಸಿಎಚ್ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ ಕೋಮಲ ಯಶೋವರ್ಧನ ರೆಡ್ಡಿ ಅಪರಾಧ ಸಾಬೀತಾದ ಹಿನ್ನೆಲೆ ಶಿಕ್ಷೆಯ ಪ್ರಮಾಣ ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಭಿಯೋಜನೆ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎಸ್ ವೀಣಾ ಪ್ರಬಲ ವಾದ ಮಂಡಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.