ETV Bharat / state

ಬೆಂಗಳೂರು ಅಭಿವೃದ್ಧಿ ಯೋಜನೆಗಳನ್ನ ಶೀಘ್ರ ಅನುಷ್ಠಾನಗೊಳಿಸಲು ಸಿಎಂ ಸೂಚನೆ

author img

By

Published : Aug 10, 2021, 9:53 PM IST

ಶಾಸಕರ ಅಭಿಪ್ರಾಯಗಳನ್ನೂ ಪರಿಗಣಿಸಿ, ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಲಾಗುವುದು. ಮಾಜಿ ಸಿಎಂ ಯಡಿಯೂರಪ್ಪ ಅವರು ಬೆಂಗಳೂರು ಅಭಿವೃದ್ಧಿಗಾಗಿ ಕೈಗೆತ್ತಿಕೊಂಡಿದ್ದ ಕಾರ್ಯಕ್ರಮಗಳನ್ನು ಮುಂದುವರೆಸಲಾಗುವುದು..

Bangalore development projects
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ನಗರದ ಅಭಿವೃದ್ಧಿಯ ಯೋಜನೆಗಳು ಇನ್ನಷ್ಟು ಚುರುಕಾಗಿ ಅನುಷ್ಠಾನಗೊಳ್ಳಬೇಕು. ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ಅಭಿವೃದ್ಧಿ ಯೋಜನೆಗಳನ್ನ ಶೀಘ್ರ ಅನುಷ್ಠಾನಗೊಳಿಸಲು ಸಿಎಂ ಸೂಚನೆ

ರಾಜಧಾನಿ ಅಭಿವೃದ್ಧಿ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ, ಯಾರೂ ಭ್ರಷ್ಟಾಚಾರಕ್ಕೆ ಆಸ್ಪದ ನೀಡಬಾರದು ಎಂದು ಸೂಚನೆ ನೀಡಿದರು. ಅಲ್ಲದೆ, ನಗರದ ಅಭಿವೃದ್ಧಿಯ ವಿಚಾರದಲ್ಲಿ ಸಚಿವರೊಂದಿಗೆ ಒಂದು ತಂಡವಾಗಿ ಕಾರ್ಯನಿರ್ವಹಿಸಲಾಗುವುದು. ಒಟ್ಟಾಗಿ ಕುಳಿತು ಚರ್ಚಿಸಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.

ಶಾಸಕರ ಅಭಿಪ್ರಾಯಗಳನ್ನೂ ಪರಿಗಣಿಸಿ, ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಲಾಗುವುದು. ಮಾಜಿ ಸಿಎಂ ಯಡಿಯೂರಪ್ಪ ಅವರು ಬೆಂಗಳೂರು ಅಭಿವೃದ್ಧಿಗಾಗಿ ಕೈಗೆತ್ತಿಕೊಂಡಿದ್ದ ಕಾರ್ಯಕ್ರಮಗಳನ್ನು ಮುಂದುವರೆಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಸಿಎಂ ನೀಡಿದ ಸೂಚನೆಗಳೇನು?

  • ಬಿಬಿಎಂಪಿ ತನ್ನ ವಾರ್ಷಿಕ ಆದಾಯ ಮಿತಿಯೊಳಗೇ ಯೋಜನೆ ರೂಪಿಸುವಂತೆ ಸಲಹೆ
  • ಬಿಡಬ್ಲ್ಯುಎಸ್‌ಎಸ್‌ಬಿಯು ಬಿಬಿಎಂಪಿ ವ್ಯಾಪ್ತಿಗೆ 110 ಗ್ರಾಮಗಳಲ್ಲಿ ನಿರ್ವಹಿಸುತ್ತಿರುವ ಎಂಟು ಸಾವಿರ ಬೋರ್‌ವೆಲ್‌ಗಳಲ್ಲಿ ಸುಸ್ಥಿತಿಯಲ್ಲಿರುವ ಬೋರ್‌ವೆಲ್‌ಗಳನ್ನು ಗುರುತಿಸಿ, ಅವುಗಳ ದುರಸ್ತಿ, ಸಮರ್ಪಕ ನಿರ್ವಹಣೆಗೆ ಕ್ರಮ
  • ನಗರದಲ್ಲಿ ವರ್ಷಾಂತ್ಯದಲ್ಲಿ ಕನಿಷ್ಠ 3 ಲಕ್ಷ ಬೀದಿ ದೀಪಗಳನ್ನು ಎಲ್​ಇಡಿ ದೀಪಗಳಿಗೆ ಪರಿವರ್ತಿಸಲು ಸೂಚನೆ
  • ಕಳೆದ ಬಾರಿ ಮಳೆಯಿಂದ ಕೊಚ್ಚಿ ಹೋದ ಅಥವಾ ಹಾಳಾದ ಪ್ರಮುಖ ರಸ್ತೆಗಳನ್ನು ಆದ್ಯತೆಯ ಮೇರೆಗೆ ದುರಸ್ತಿ
  • 860 ಕಿ.ಮೀ. ಆರ್ಟೀರಿಯಲ್ ಮತ್ತು ಸಬ್-ಆರ್ಟೀರಿಯಲ್ ರಸ್ತೆಗಳ ಅಭಿವೃದ್ಧಿ ಹಾಗೂ ನಿರ್ವಹಣೆಯ ಬಗ್ಗೆ ಮತ್ತು ಸಂಚಾರ ನಿರ್ವಹಣೆ ಬಗ್ಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಕುರಿತು ಚಿಂತನೆ ನಡೆಸಲಾಗುವುದು.
  • ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಶೀಘ್ರವೇ ಪೂರ್ಣಗೊಳಿಸಲು ಸೂಚನೆ
  • ಮುಖ್ಯಮಂತ್ರಿಗಳ ನವನಗರೋತ್ಥಾನ ಯೋಜನೆಗಳನ್ನು ಚುರುಕುಗೊಳಿಸಲು ಸೂಚನೆ
  • ಅಕ್ಟೋಬರ್‌ನೊಳಗೆ ಮೂರನೇ ಹಂತದ ನಗರೋತ್ಥಾನ ಯೋಜನೆಗೆ ಕಾಮಗಾರಿಗಳನ್ನು ಗುರುತಿಸಿ, ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ
  • ನಿರ್ಮಾಣದ ವಿವಿಧ ಹಂತದಲ್ಲಿರುವ 8 ಫ್ಲೈ ಓವರ್‌ಗಳ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಸೂಚನೆ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.