ಬೆಂಗಳೂರು: ಯುವಕನೊಬ್ಬ ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡಿದ್ದರಿಂದ ಸರಣಿ ಅಪಘಾತ ನಡೆದಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಜೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ರಿಂಗ್ ರಸ್ತೆಯ ಲಗ್ಗೆರೆ ಮೆಲ್ಸೇತುವೆ ಬಳಿ ಈ ಘಟನೆ ನಡೆದಿದ್ದು, ಕಾರು ಚಾಲಕ ನವೀನ್(23) ರಾಜಾಜಿನಗರ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ರಿಂಗ್ ರಸ್ತೆಯ ಲಗ್ಗೆರೆ ಮೆಲ್ಸೇತುವೆ ಬಳಿ ಬುಧವಾರ ಸಂಜೆ ವೇಳೆಗೆ ನವೀನ್ ಎಂಬಾತ ತನ್ನ ಸ್ನೇಹಿತನ ಹಳೆಯ ಕಾರನ್ನು ಅಡ್ಡಾದಿಡ್ಡಿಯಾಗಿ ಚಾಲನೆ ಮಾಡಿಕೊಂಡು ಬಂದಿದ್ದಾನೆ. ಈ ವೇಳೆ ಎರಡು ಸ್ಕೂಟರ್ ಹಾಗೂ ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯವಾಗಿದೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.